ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆ ವತಿಯಿಂದ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಥ

ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆ ವತಿಯಿಂದ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಥ

ಕೊಳ್ಳೇಗಾಲ :-ಯಾರಿರಲಿ, ಎಂತಿರಲಿ ಎಲ್ಲರ ದೇಹದಲ್ಲೂ ಇರುವ ರಕ್ತ ಒಂದೇ ಅಲ್ಲವೇ? ಹೌದು, ಜಗತ್ತಿನೆಲ್ಲೆಡೆ ಪ್ರತಿ ಕ್ಷಣ ಲೆಕ್ಕವಿಲ್ಲದಷ್ಟು ಮಂದಿ ರಕ್ತದ ಅಗತ್ಯದಲ್ಲಿರುತ್ತಾರೆ; ಸಾವಿರಾರು ಮಂದಿ ತಮಗೆ ಬೇಕಾದವರಿಗೆ ಬೇಕಿರುವ ರಕ್ತವನ್ನು ಹುಡುಕಿಕೊಂಡು ಆತಂಕದಿಂದ ಅಲೆಯುತ್ತಿರುತ್ತಾರೆ. ರಕ್ತ ಅಕ್ಷರಶಃ ಜೀವದ್ರವ್ಯ. ಈ ಹಿನ್ನೆಲೆಯಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತದೆ. ಪ್ರತಿ ವರ್ಷವೂ ಒಂದೊಂದು ಥೀಮ್ ಇಟ್ಟುಕೊಂಡು ಆಚರಿಸಲಾಗುತ್ತದೆ.

 

 

 

 

 

 

 

 

 

 

 

ಈ ಬಾರಿ ‘ಇತರರಿಗಾಗಿ ಬದುಕಿ, ರಕ್ತ ನೀಡಿ, ಜೀವವನ್ನೇ ಹಂಚಿಕೊಳ್ಳಿ’ ಎಂಬ ಸಂದೇಶದೊಂದಿಗೆ ಆಚರಿಸಲಾಗುತ್ತಿದೆ. ಅಪಘಾತ, ಕ್ಯಾನ್ಸರ್, ಹೃದಯಸಂಬಂಧಿ ಸಮಸ್ಯೆಗಳು, ಹೆರಿಗೆ ಸಂಬಂಧಿ ಚಿಕಿತ್ಸೆಯ ವೇಳೆ ವ್ಯಾಪಕವಾಗಿ ರಕ್ತ ಬೇಕಾಗುತ್ತದೆ. ಆದರೆ, ಭಾರತವೂ ಸೇರಿದಂತೆ ಇಡೀ ವಿಶ್ವದಾದ್ಯಂತ ಬೇಡಿಕೆಗೆ ತಕ್ಕಂತೆ ರಕ್ತದ ಪೂರೈಕೆಯಿಲ್ಲ.

 

 

 

 

 

 

 

 

 

ಹೀಗಾಗಿ ಬದುಕುವ ಎಲ್ಲ ಅವಕಾಶಗಳಿದ್ದರೂ ಎಷ್ಟೋ ಜೀವಗಳು ರಕ್ತದ ಕೊರತೆಯಿಂದಾಗಿ ಆಸ್ಪತ್ರೆಗಳಲ್ಲಿಅಸು ನೀಗಿವೆ. ಈ ಹಿನ್ನೆಲೆಯಲ್ಲಿವಿಶ್ವದ ಬಹುತೇಕ ರಾಷ್ಟ್ರಗಳ ಸರಕಾರಗಳು, ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿವೆ. ರಕ್ತದಾನ ಮಾಡಲು ದುಡ್ಡು ಬೇಕಾ ಅದಕ್ಕೆ ಬೇಕಾಗಿರುವುದು ಒಂದು ಜೀವಕ್ಕೆ ಮಿಡಿಯುವ ದೊಡ್ಡ ಮನಸ್ಸಷ್ಟೆ.

 

 

 

 

 

 

 

 

 

 

 

ಅಂತಾರಾಷ್ಟ್ರೀಯ ರಕ್ತದಾನ ದಿನದಂದು ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಹೋಲಿಕ್ರಾಸ್ ಆಸ್ಪತ್ರೆ ವೈದ್ಯರು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಕಾಮಗೆರೆ ಗ್ರಾಮದಲ್ಲಿ ಕೊಳ್ಳೇಗಾಲ -ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಅಂತಾರಾಷ್ಟ್ರೀಯ ರಕ್ತದಾನ ದಿನಾಚರಣೆಯ ಅಂಗವಾಗಿ ಕೊಂಗರಹಳ್ಳಿಯ ತನಕ ರಕ್ತದಾನದ ಪ್ರಾಮುಖ್ಯತೆ ಸಾರುವ ಪೋಸ್ಟರ್ ಗಳನ್ನು ಹಿಡಿದು ಅರಿವಿನ ಜಾಥ ಮಾಡಲಾಯಿತು.

 

 

 

 

 

 

 

 

ನಂತರ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವಿವಿಧ ಗ್ರಾಮದ ದಾನಿಗಳು ಪಾಲ್ಗೊಂಡು ರಕ್ತದಾನ ಮಾಡಿದರು. ಇನ್ನು ಈ ಸಂದರ್ಭದಲ್ಲಿ ಹೋಲಿ ಕ್ರಾಸ್ ಆಸ್ಪತ್ರೆ ಆಡಳಿತ ಅಧಿಕಾರಿ ಡಾ ಡೆಲಿನ್ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ನೌಕರರು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

ವರದಿ :- ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!