ಕಾಡುಗೊಲ್ಲರ ವಿರುದ್ಧವಾದರೇ…. ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್.
ಕಾಡುಗೊಲ್ಲರ ಹೆಸರೇಳಿಕೊಂಡು ಗೆದ್ದಿರುವ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಹೆಸರನ್ನು ಬದಲಾಯಿಸಲು ದೊಡ್ಡ ಹುನ್ನಾರವನ್ನು ನಡೆಸುತ್ತಿದ್ದಾರೆ ಎಂದು ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿಯ ಅಧ್ಯಕ್ಷರಾದ ನಾಗಣ್ಣ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿ ಅಧ್ಯಕ್ಷ ನಾಗಣ್ಣ ರವರು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕಾಡುಗೊಲ್ಲ ಜನಾಂಗವು ಬುಡಕಟ್ಟು ಜನಾಂಗದ ಲಕ್ಷಣಗಳನ್ನು ಹೊಂದಿರುವುದರಿಂದ ಸಂವಿಧಾನ ಬದ್ಧವಾಗಿ ಪರಿಶಿಷ್ಟ ಪಂಗಡಕ್ಕೆ ಸೇರಬೇಕು ಎಂದು ಒತ್ತಾಯಿಸಿದರು .
ಇನ್ನು ರಾಜ್ಯ ಸರ್ಕಾರ ಸಿರಾ ಉಪ ಚುನಾವಣೆಯನ್ನು ಮುಂದಿಟ್ಟುಕೊಂಡು ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಟಿಪ್ಪಣಿ ಬರೆದು ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ಸೂಚಿಸಿದರು.
ನಂತರದ ಬೆಳವಣಿಗೆಯಲ್ಲಿ ಅದನ್ನು ಗೊಲ್ಲ ಅಭಿವೃದ್ಧಿ ನಿಗಮ ಎಂದು ಹೆಸರನ್ನು ಬದಲಾಯಿಸಲು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಒತ್ತಡ ಹಾಕಿದ ಪರಿಣಾಮ ಕಾಡುಗೊಲ್ಲ ಬದಲಾಗಿ ಗೊಲ್ಲ ಅಭಿವೃದ್ಧಿ ನಿಗಮ ಮಾಡುವಂತೆ ಮತ್ತೊಂದು ಟಿಪ್ಪಣಿ ಬರೆದಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ಪುನಹ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಹೇಳಿದ್ದರು ಮುಖ್ಯಮಂತ್ರಿಯವರ ಟಿಪ್ಪಣಿ ಆದೇಶದಂತೆ ಕರ್ನಾಟಕ ಸರ್ಕಾರದ ರಾಜ್ಯಪಾಲರ ಆದೇಶದ ಅನ್ವಯ ಕಾನೂನಾತ್ಮಕವಾಗಿ ಕಳೆದ ವರ್ಷ ಅಧಿಸೂಚನೆ ಹೊರಡಿಸಿ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಸ್ಥಾಪಿನೆ ಮಾಡಿ ಬಜೆಟ್ನಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಸರ್ಕಾರದ ವತಿಯಿಂದ ವ್ಯವಸ್ಥಾಪಕ ನಿರ್ದೇಶಕರ ನ್ನು ಸಹ ಅಧಿಕೃತವಾಗಿ ನೇಮಿಸಿ ಕಾರ್ಯಚಟುವಟಿಕೆಯನ್ನು ಪ್ರಾರಂಭಿಸಿದೆ.
ಆದರೆ ಇಂತಹ ಸಮಯದಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರ ಒತ್ತಡಕ್ಕೆ ಮಣಿದು ಮತ್ತೆ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಗೊಲ್ಲ_ ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದು ಬದಲಾವಣೆ ಮಾಡಲು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಪುನಹ ನಿಗಮದ ಹೆಸರನ್ನು ಬದಲಾಯಿಸಲು ದೊಡ್ಡ ಹುನ್ನಾರವನ್ನು ನಡೆಸಿದ್ದಾರೆ .ಇದು ಕಾಡುಗೊಲ್ಲ ಸಮುದಾಯಕ್ಕೆ ಮಾಡುತ್ತಿರುವ ದೊಡ್ಡ ಅನ್ಯಾಯ ಇದರ ವಿರುದ್ಧ ಮುಂದಿನ ದಿನದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ನೇರ ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಎಷ್ಟು ದಿನಗಳ ಕಾಲ ಪ್ರತ್ಯೇಕ ಜಾತಿ ಐಡೆಂಟಿಟಿ ಇರದ ಕಾಡುಗೊಲ್ಲರು ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಆದರೆ ನಮ್ಮ ಹೆಸರು ಹೇಳಿಕೊಂಡು ಗೊಲ್ಲರು ಯಾದವರು ರಾಜಕೀಯ ಅಧಿಕಾರ ಸೇರಿದಂತೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಹಾಕಿಕೊಳ್ಳುತ್ತಿದ್ದರು ಈಗ ಕಾಡುಗೊಲ್ಲ ಬುಡಕಟ್ಟು ಜನರಿಗೆ ಪ್ರತ್ಯೇಕ ಸೌಲಭ್ಯ ಸಿಗುವುದನ್ನು ಯಾದವ ಅಥವಾ ಗೊಲ್ಲರು ತಪ್ಪಿಸಲು ಹೊರಟಿರುವುದು ನಿಜಕ್ಕೂ ಖಂಡನೀಯ
ಇನ್ನೊಬ್ಬರ ಅಭಿವೃದ್ಧಿ ನಿಗಮ ಮಾಡಿದರೆ ನಮ್ಮ ಯಾವುದೇ ವಿರೋಧವಿಲ್ಲ ಆದರೆ ಕಾಡುಗೊಲ್ಲ ಬುಡಕಟ್ಟು ಜನಾಂಗದ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪ್ರತ್ಯೇಕವಾಗಿ ರಚನೆ ಆಗಿರುವ ಕಾಡುಗಳ ಅಭಿವೃದ್ಧಿ ನಿಗಮದ ಹೆಸರನ್ನ ಅಭಿವೃದ್ಧಿ ನಿಗಮ ಎಂದು ಬದಲಾಯಿಸಿದರೆ ಇದಕ್ಕೆ ರಾಜ್ಯದ ಕಾಡುಗೊಲ್ಲರ ಸಂಪೂರ್ಣ ವಿರೋಧವಿದೆ.
ಸರ್ಕಾರ ಇಂತಹ ಇಬ್ಬಗೆಯ ಧೋರಣೆ ಮತ್ತು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಡುಗೊಲ್ಲ ಸಮುದಾಯದ ಮೇಲೆ ಇಟ್ಟುಕೊಂಡಿರುವ ದ್ವೇಷದ ವಿರುದ್ಧ ನಾವು ಸಾಂವಿಧಾನಿಕ ಚೌಕಟ್ಟಿನಲ್ಲಿ ರಾಜ್ಯದ ಕಾಡುಗೊಲ್ಲರು ಬೀದಿಗಿಳಿದು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.