ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಿಜೆಪಿಯನ್ನು ಕ್ಲೀನ್ ಸ್ವೀಪ್ ಮಾಡಿದ ಕೈ ಪಡೆ.
ಬೆಂಗಳೂರು – ಇಂದು ಹೊರಬಿದ್ದಿರುವ ಕರ್ನಾಟಕ ರಾಜ್ಯದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಕ್ಷಣಕ್ಕೂ ಹೊಸ ಇತಿಹಾಸವನ್ನು ಸೃಷ್ಟಿಸುತ್ತಿದ್ದು .ಈ ಬಾರಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಹಲವು ವರ್ಷದಿಂದ ಬೇರು ಬಿಟ್ಟಿದ್ದು ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಮಂಗಳೂರು ಜಿಲ್ಲೆಯ ಮತದಾರರು ಚಿಕ್ಕಮಂಗಳೂರು ಜಿಲ್ಲೆಯಿಂದ ಸಂಪೂರ್ಣವಾಗಿ ಬಿಜೆಪಿ ಪಕ್ಷವನ್ನು ಹೊರಹಾಕುವ ಮೂಲಕ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನ ಕ್ಲೀನ್ ಸ್ವೀಪ್ ಮಾಡಿ ಇತಿಹಾಸವನ್ನು ಸೃಷ್ಟಿ ಮಾಡಿದ್ದಾರೆ.
ಇನ್ನು ಚಿಕ್ಕಮಗಳೂರು ಜಿಲ್ಲೆ ಐದು ಕ್ಷೇತ್ರಗಳನ್ನ ಒಳಗೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಸಂಪೂರ್ಣ ಕಳಪೆ ಪ್ರದರ್ಶನ ತೋರುವ ಮೂಲಕ ಈ ಬಾರಿ ಬಿಜೆಪಿ ಪಕ್ಷ ಚಿಕ್ಕಮಂಗಳೂರಿನಿಂದ ಹೊರಹಾಕಲ್ಪಟ್ಟಿದೆ.
ಸತತ ನಾಲ್ಕು ಬಾರಿ ಶಾಸಕರಾಗಿದ್ದ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಹ ಈ ಬಾರಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹೀನಾಯವಾಗಿ ಸೋಲುವ ಮೂಲಕ ಸೋಲಿನ ಅನುಭವ ಅನುಭವಿಸಿದ್ದಾರೆ.
ಐದು ಕ್ಷೇತ್ರಗಳನ್ನ ಒಳಗೊಂಡಿರುವ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಪಕ್ಷ ಕೇವಲ ಒಂದು ಸ್ಥಾನವನ್ನು ಸಹ ಪಡೆಯದೆ ಇರುವ ಮೂಲಕ ಸಂಪೂರ್ಣ ಕಳಪೆ ಪ್ರದರ್ಶನ ತೋರಿದೆ.