ಕರ್ನಾಟಕ ಬಂದ್ ಕರೆ ಕೈಬಿಟ್ಟ ಕನ್ನಡಪರ ಸಂಘಟನೆಗಳು.
ಬೆಂಗಳೂರು_ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ನಂತರ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದ ಸಲುವಾಗಿ ರಾಜ್ಯದ್ಯಂತ ಕನ್ನಡಿಗರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಎಡೆಮಾಡಿತ್ತು ನಂತರ ಎಂಇಎಸ್ ಹಾಗೂ ಶಿವಸೇನೆಯ ಸಂಘಟನೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದವು.
ಆದರೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸಿ.ಎಂ ಬೊಮ್ಮಾಯಿ ರವರು ಕನ್ನಡಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ ಬಂದ್ ಕೈಬಿಡಲು ಕೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ರವರ ಮನವಿ ಮೇರೆಗೆ ನಾಳೆ ಕರೆ ನೀಡಿದ್ದ ಕರ್ನಾಟಕ ಬಂದ್ ಹಿಂಪಡೆದಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.
ಇನ್ನು ಸಭೆಯಲ್ಲಿ ರಾಜ್ಯದ ವಿವಿಧ ಕನ್ನಡಪರ ಸಂಘಟನೆಯ ಮುಖಂಡರು ಬಂದು ವಾಪಸ್ ಪಡೆದಿರುವ ಬಗ್ಗೆ ಸ್ಪಷ್ಟಪಡಿಸಿದ್ದು ನಾಳೆ ರಾಜ್ಯದಲ್ಲಿ ಬಂದ್ ಇರುವುದಿಲ್ಲ ಆದರೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ವರದಿ _ಮಾರುತಿ ಪ್ರಸಾದ್ ತುಮಕೂರು