ವಾಲ್ಮೀಕಿ ಇತಿಹಾಸ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು – ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್
ದೇವನಹಳ್ಳಿ: ವಾಲ್ಮೀಕಿ ಇತಿಹಾಸ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಪಂ ಆವರಣದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು. ವಾಲ್ಮೀಕಿ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲ ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಡೆಯುವ ಕೆಲಸವಾಗಬೇಕು. ರಾಮಾಯಣದಂತಹ ಮಹಾ ಕಾವ್ಯವನ್ನು ರಚಿಸಿರುವ ವಾಲ್ಮೀಕಿ ಆದಿಕವಿಯನ್ನು ಸ್ಮರಿಸುವ ದಿನವಾಗಿದೆ. ಪ್ರತಿಯೊಬ್ಬರು ಇವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಇವರ ಜೀವನ ಚರಿತ್ರೆಯನ್ನು ಅರಿಯಬೇಕು ಎಂದರು.
ಗ್ರಾಪಂ ಅಧ್ಯಕ್ಷ ಕೆ.ಆರ್.ನಾಗೇಶ್ ಮಾತನಾಡಿ, ರಾಮಾಯಣವನ್ನು ಸಂಸ್ಕೃತದಲ್ಲಿ ಬರೆದ ಮೊದಲ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿಯಾಗಿದ್ದಾರೆ. ಪ್ರತಿ ವರ್ಷ ಅ.೨೦ರಂದು ಇವರ ಜಯಂತಿಯನ್ನು ಬಹಳ ಅದ್ದೂರಿಯಾಗಿ ಆಚರಿಸುತ್ತಾರೆ. ಆದರೆ ಕೋವಿಡ್ ಹರಡುವ ಭೀತಿಯಿಂದಾಗಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆಯಲ್ಲಿ ಗ್ರಾಪಂ ಸದಸ್ಯರಾದ ಲಕ್ಷ್ಮೀಕಾಂತ್, ನರಸಿಂಹಮೂರ್ತಿ, ಎಸ್.ಜಿ.ಮಂಜುನಾಥ್, ಸೋಮಶೇಖರ್, ಮಂಜುನಾಥ್.ಎನ್, ಎಸ್.ಎಂ.ವೆಂಕಟೇಶ್, ನಾಗೇಶ್.ಟಿ, ಪವಿತ್ರ, ನಂದಿನಿ, ಮಾಜಿ ಸದಸ್ಯ ನಜೀರ್, ಕಾರ್ಯದರ್ಶಿ ಚಂದ್ರಪ್ಪ, ಸಿಬ್ಬಂದಿ ಇದ್ದರು.
ಮಂಜು ಬೂದಿಗೆರೆ
9113813926