ಕಾರಹಳ್ಳಿ ಗ್ರಾಮ ಸಭೆ ಯಶಸ್ವಿ

ಕಾರಹಳ್ಳಿ ಗ್ರಾಮ ಸಭೆ ಯಶಸ್ವಿ

 

ಕಾರಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 2021-22 ನೇ ಸಾಲಿನ ಮೊದಲ ಹಂತದ ಗ್ರಾಮಸಭೆಯಲ್ಲಿ.

 

ದೇವನಹಳ್ಳಿ: ಗ್ರಾಮ ಪಂಚಾಯಿತಿಗಳ ಮೂಲಕ ಸರ್ಕಾರದ ಯೋಜನೆಗಳನ್ನು ಅನುಷ್ಠಾನ ಮಾಡುವ ಉದ್ದೇಶದಿಂದ ಗ್ರಾಮಸಭೆಗಳನ್ನು ನಡೆಸುತ್ತದೆ. ಗ್ರಾಮಸಭೆಗಳು ಗ್ರಾಮಗಳ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಸಿದ್ಧಪಡಿಸಿ ಗ್ರಾಮಗಳ ಬದಲಾವಣೆಗೆ ಮಾರ್ಗದರ್ಶನವಾಗಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ವಸಂತ್ ಕುಮಾರ್ ಹೇಳಿದರು.

 

   ತಾಲ್ಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 2021-22 ನೇ ಸಾಲಿನ ಮೊದಲ ಹಂತದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

  ಗ್ರಾಮಸಭೆಗಳ ಮಹತ್ವವನ್ನು ತಿಳಿದುಕೊಂಡು, ಇಲ್ಲಿ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಜನಸೌಲಭ್ಯಗಳಿಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು, ಎಲ್ಲವೂ ಪಂಚಾಯಿತಿಯಲ್ಲಿ ಸಿಗುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಜನರು ಇಂತಹ ಗ್ರಾಮಸಭೆಗಳಲ್ಲಿ ಭಾಗವಹಿಸುವ ಮೂಲಕ ಗ್ರಾಮಸಭೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

 

   ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಿಕಾರವಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯ ದಿಕ್ಕುಕಾಣಲು ಗ್ರಾಮಸಭೆಗಳು ತಾಯಿಬೇರು ಇದ್ದಂತೆ, ಗ್ರಾಮಗಳು ಉದ್ಧಾರವಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ಇನ್ನೂ ನನಸಾಗಿಲ್ಲ. ವಾರ್ಡ್‌ಸಭೆ, ಗ್ರಾಮಸಭೆಗಳು ಕ್ರಿಯಾಶೀಲಗೊಳ್ಳದಿದ್ದರೆ ಪಂಚಾಯತ್‌ ರಾಜ್‌ ವ್ಯವಸ್ಥೆಗೆ ಅರ್ಥವಿರುವುದಿಲ್ಲ. ಪಂಚಾಯತ್‌ ರಾಜ್‌ ವ್ಯವಸ್ಥೆ ಬಲಗೊಳ್ಳಲು ಗ್ರಾಮಸಭೆಗಳು ಕ್ರಿಯಾಶೀಲಗೊಳ್ಳಬೇಕು. ಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳು ಅಕ್ಷರಶಃ ಅನುಷ್ಠಾನಗೊಳ್ಳಬೇಕು. ಆಶ್ರಯ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಗ್ರಾಮಸಭೆಯಲ್ಲಿ ನಡೆಯಬೇಕು. ಈ ನಿಟ್ಟಿನಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಸಾರ್ವಜನಿಕರಿಗೂ ಸಭೆಯಲ್ಲಿ ಭಾಗವಹಿಸಲು ಮಾಹಿತಿ ನೀಡಲಾಗಿದೆ ಎಂದರು.

 

  ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕಾರಹಳ್ಳಿ ಮುನೇಗೌಡ ಮಾತನಾಡಿ, ಗ್ರಾಮಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳದಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಡಿಪಿ ಸಭೆಯನ್ನು ಅಚ್ಚುಕಟ್ಟಾಗಿ ನಡೆಸಿ ಅಭಿವೃದ್ಧಿಗೆ ಹೊಸ ಆಯಾಮ ನೀಡಿ ಪಂಚಾಯಿತಿಗಳಿಗೆ ಹೊಸ ಚೈತನ್ಯ ನೀಡುವ ಸಂಕಲ್ಪವನ್ನು ಮಾಡಬೇಕಾಗಿದೆ. ಗ್ರಾಮಸಭೆಗಳು ಗ್ರಾಮಗಳ ಅಭಿವೃದ್ಧಿಗೆ ಸೂಕ್ತ ವೇದಿಕೆಯಾಗಿವೆ. ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಗ್ರಾಮಸಭೆಗಳು ಉಪಯುಕ್ತವಾಗಿವೆ. ಗ್ರಾಮದ ಅಭಿವೃದ್ಧಿಗಾಗಿ ಶಾಸಕರಿಂದ 50 ಲಕ್ಷ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

 

  ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕವಿತ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಹಳ್ಳಿಯಲ್ಲೂ ಸ್ವಚ್ಚತೆಗೆ ಆಧ್ಯತೆ ನೀಡಲಾಗಿದೆ. ನರೇಗಾ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ಜನರಿಗೆ ಅರಿವು ಮೂಡಿಸಲಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನೂ ಮಾಡಲಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಅಗತ್ಯ ಕ್ರಮಗಳು ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಪಂಚಾಯಿತಿಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತದೆ ಎಂದರು.

 

 ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಂತಮ್ಮಮುನಿಕೃಷ್ಣಪ್ಪ, ಸದಸ್ಯರಾದ ಕೆಂಪಣ್ಣ, ಪದ್ಮಮ್ಮ, ಸರಳ, ಕೃಷ್ಣವೇಣಿ, ಜಯರಾಮ್, ಲಕ್ಷ್ಮೀ, ರಾಜಣ್ಣ, ಮಮತಾ, ಚಂದ್ರಶೇಖರ್, ರಮೇಶ್, ಮುನಿರಾಜು, ರವಿಕುಮಾರ್, ಸುಮಾ, ಕೇಶವಮೂರ್ತಿ, ಆಂಜಿನಪ್ಪ, ನಾಗರತ್ನಮ್ಮ, ಮಾಜಿ ಅಧ್ಯಕ್ಷ ದೇವರಾಜು, ತಾ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಿಮುನಿಕೃಷ್ಣಪ್ಪ, ಹಾಜರಿದ್ದರು.

 

ಮಂಜು ಬೂದಿಗೆರೆ

9113813926

Leave a Reply

Your email address will not be published. Required fields are marked *

You cannot copy content of this page

error: Content is protected !!