ರಾಜ್ಯಾದ್ಯಂತ ಕೋರೋಣ ಮಹಾಮಾರಿ ಅಬ್ಬರಿಸುತ್ತಿದ್ದು ದೇಶ ಹಾಗೂ ರಾಜ್ಯದ ಜನತೆ ಹೈರಾಣಾಗಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡು ಬರುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ತ್ವರಿತಗತಿಯಲ್ಲಿ ಲಸಿಕೆ ನೀಡಲು ಸಂಪೂರ್ಣ ವಿಫಲವಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಗೌಡರವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ಕರವೇ ವತಿಯಿಂದ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಲಸಿಕೆ ನೀಡುವಲ್ಲಿ ಎಡವಿದ್ದು. ಇದರ ಅಂಗವಾಗಿ ರಾಜ್ಯ ಸರ್ಕಾರ ವನ್ನು ಎಚ್ಚರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ರವರ ನೇತೃತ್ವದಲ್ಲಿ ರಾಜ್ಯಾದ್ಯಂತ “ಲಸಿಕೆ ಕೊಡಿ ಇಲ್ಲವೇ ಅಧಿಕಾರ ಬಿಡಿ” ಎಂದು ಪ್ರತಿಭಟನೆ ನಡೆಸಿದರು. ಇದರ ಅಂಗವಾಗಿ ತುಮಕೂರಿನಲ್ಲೂ ಸಹ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೂ ರಾಜ್ಯ ಸರ್ಕಾರ ತ್ವರಿತಗತಿಯಲ್ಲಿ ಲಸಿಕೆ ನೀಡದೆ ಸಾರ್ವಜನಿಕರ ಸಾವಿನ ಸರಮಾಲೆಯಲ್ಲಿ ರಾಜ್ಯ ಸರ್ಕಾರ ನಡೆಯುತ್ತಿದೆ, ಹಾಗಾಗಿ ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು ಜೂನ್ ತಿಂಗಳ ಒಳಗಾಗಿ ರಾಜ್ಯದ ಪ್ರತಿ ಸಾರ್ವಜನಿಕರಿಗೂ ಕರೋನ ಲಸಿಕೆಯ ಮೊದಲನೆಯ ಡೋಸ್ ನೀಡಬೇಕು ಎಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.