ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ಹುದ್ದೆಯಿಂದ ರೋಹಿತ್ ಚಕ್ರತೀರ್ಥ ಬಿಡಲು ಕರವೇ ಒತ್ತಾಯ.
ತುಮಕೂರು _ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿನ ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿಯನ್ನು ಸರ್ಕಾರ ಕೂಡಲೇ ರದ್ದು ಪಡಿಸಿ ಹಿಂದಿನ ವರ್ಷದ ಪಠ್ಯವನ್ನು ಮಕ್ಕಳಿಗೆ ವಿಸ್ತರಿಸಲು ಆಗ್ರಹಿಸಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆಯಿಂದ (ನಾರಾಯಣಗೌಡ ಬಣ) ಪ್ರತಿಭಟನೆ ನಡೆಸಲಾಯಿತು.
ಇನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿ ನೇಮಿಸಿತು ಅದರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ವಿಜ್ಞಾನ ಪಠ್ಯದಲ್ಲಿ ಖಂಡನಾರ್ಹ ಬದಲಾವಣೆಗಳನ್ನು ತಂದಿರುವುದು ಖಂಡನಾರ್ಹವಾಗಿದೆ ಹಾಗೂ ರಾಷ್ಟ್ರಕವಿ ಕುವೆಂಪು ರವರಿಗೆ ತುಚ್ಚವಾಗಿ ಅವಮಾನ ಮಾಡಿ ರಾಷ್ಟ್ರಗೀತೆಯನ್ನು ಅಪಮಾನ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ಕೂಡಲೇ ಸಮಿತಿಯಿಂದ ಕೈಬಿಟ್ಟು ಅವರ ಮೇಲೆ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಂತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಹಾಗಾಗಿ ಕೂಡಲೇ ಸರ್ಕಾರ ಶಿಸ್ತುಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿದ್ದು. ಕನ್ನಡ ನಾಡು ಕಂಡ ಮಹಾನ್ ಚೇತನ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ಕೆಲಸಕ್ಕೆ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮುಂದಾಗಿದ್ದು ಈ ಮೂಲಕ ಕನ್ನಡ ಹಾಗೂ ಕನ್ನಡಿಗರನ್ನು ಅವಮಾನಿಸುವ ಕೆಲಸಕ್ಕೆ ರೋಹಿತ್ ಚಕ್ರತೀರ್ಥ ಮುಂದಾಗಿದ್ದಾರೆ ಆದರೆ ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಸರ್ಕಾರ ಕೂಡ ಚಕ್ರತೀರ್ಥ ಬೆಂಬಲಕ್ಕೆ ನಿಂತಿರುವುದು ನಿಜಕ್ಕೂ ಒಳ್ಳೆಯ ಸಂಗತಿಯಲ್ಲ ಕೂಡಲೇ ರೋಹಿತ್ ಚಕ್ರತಿರ್ಥ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ ನಂತರ ತುಮಕೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತುಮಕೂರು ನಗರ ಅಧ್ಯಕ್ಷ ಕುಮಾರ್, ಯುವ ಘಟಕದ ಅಧ್ಯಕ್ಷ ಕುಂಭ ಯ್ಯ, ಪಾವಗಡ ತಾಲೂಕು ಅಧ್ಯಕ್ಷ ವಿಷ್ಣು ಪ್ರಸಾದ್ ಚಿತ್ತಪ್ಪ, ನಾಗಮ್ಮ, ಲಲಿತಾ, ನಾಗರಾಜು ಶ್ರೀನಿವಾಸ್ ಸೇರಿದಂತೆ ಹಲವು ಕಾರ್ಯಕರ್ತರು ಹಾಜರಿದ್ದರು.
ವರದಿ _ಮಾರುತಿ ಪ್ರಸಾದ್ ತುಮಕೂರು