ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿರಂತರ ತೈಲಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಅರುಣ್ ಕುಮಾರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಿರಂತರ ತೈಲಬೆಲೆ ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕುದುರೆಗಾಡಿಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ತುಂಬಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ರಾಜ್ಯ ಅಧ್ಯಕ್ಷ ಅರುಣ್ ಕುಮಾರ್ ಕೊರೋನಾ ಸಂಕಷ್ಟದ ಸಮಯದಲ್ಲಿ ದೇಶದ ಜನರು ನಲುಗಿ ಹೋಗಿದ್ದಾರೆ ತಿನ್ನಲು ಅನ್ನವಿಲ್ಲದೆ ಮಾಡಲು ಕೆಲಸವಿಲ್ಲದೇ ಅತ್ಯಂತ ಹೀನ ಸ್ಥಿತಿಯಲ್ಲಿ ಬದುಕನ್ನು ಜನಸಾಮಾನ್ಯರು ನಡೆಸುತ್ತಿದ್ದು ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಹಿತ ಕಾಯುವಲ್ಲಿ ವಿಫಲವಾಗಿದ್ದು ಕೇವಲ ಲಸಿಕೆ ನೀಡುವುದು ಕೊರೋನಾ ನಿಯಂತ್ರಣದ ವಿಷಯವಾಗಿ ಕಾಲಹರಣ ಮಾಡುತ್ತಿದೆ ಬೆಲೆ ನಿಯಂತ್ರಣ ಮಾಡಲು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿದ್ದು ಸ್ವಾಭಾವಿಕವಾಗಿ ಎಲ್ಲಾ ದಿನಬಳಕೆ ವಸ್ತುಗಳು ದುಬಾರಿಯಾಗಿವೆ ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ಕನಿಷ್ಠ ಜೀವನವನ್ನು ನಡೆಸಲು ಸಾಧ್ಯವಾಗುವುದಿಲ್ಲ ಆದ್ದರಿಂದ ಕೂಡಲೇ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲದ ಮೇಲಿನ ಬೆಲೆಯನ್ನು ಕಡಿಮೆ ಮಾಡಿ ಸಾರ್ವಜನಿಕರು ನೆಮ್ಮದಿಯ ಜೀವನವನ್ನು ನಡೆಸಲು ಅವಕಾಶ ಮಾಡಿಕೊಡಬೇಕು ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರವಾದ ಪ್ರತಿಭಟನೆಯನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದರು