ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ಬಿಎಸ್ ಯಡಿಯೂರಪ್ಪ ರಾಜೀನಾಮೆ

ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ಬಿಎಸ್ ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು: ಕೆಲವು ತಿಂಗಳಿನಿಂದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದ್ದು, ಬಿಎಸ್‍ವೈ ಅವರು ಇಂದು ಭಾಷಣ ಮಾಡುತ್ತ ಊಟದ ನಂತರ ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಲಿದ್ದೇನೆ ಎಂದು ಭಾವುಕ ನುಡಿಗಳನ್ನಾಡಿದರು. ಭೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದು, ನಾಲ್ಕು ಬಾರಿ ಮುಖ್ಯಮಮತ್ರಿ ಸ್ಥಾನಕ್ಕೇರಿದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿ, ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ.

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಪಕ್ಷವನ್ನು ಅಧಿಕಾರ ತಂದ ಕೀರ್ತಿ ಯಡಿಯೂರಪ್ಪನವರದು. 2007, 2008, 2018, 2019 ರಲ್ಲಿ ಬಿ.ಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದರು. ಕರ್ನಾಟಕದಲ್ಲಿ ನಾಲ್ಕು ಬಾರಿ ಸಿಎಂ ಆದ ಏಕೈಕ ವ್ಯಕ್ತಿ ಬಿಎಸ್‍ವೈ.

ರಾಜಭವನದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ: ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಸೋಲಿಲ್ಲದ ಸರದಾರನಂತೆ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿ, ಒಮ್ಮೆ ಶಿಕ್ಷಣ ಸಚಿವರಾಗಿ ಅಧಿಕಾರ ನಡೆಸಿದ ಕಾಗೇರಿ ಪ್ರಸ್ತುತ ವಿಧಾನ ಸಭಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ದಿನಗಳಿಂದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಇವರ ಹೆಸರು ಮತ್ತೆ-ಮತ್ತೆ ಬರುತ್ತಲೇ ಎದ್ದು, ಇಂದು ರಾಜಭನಕ್ಕೆ ಭೇಟಿ ನೀಡಿ ರಾಜ್ಯಪಾಲರನ್ನು ಭೇಟಿಯಾಗಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

 

Leave a Reply

Your email address will not be published. Required fields are marked *

You cannot copy content of this page

error: Content is protected !!