ಶಿವಸೇನೆ ಹಾಗೂ ಎಂಇಎಸ್ ನಿಷೇಧ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಆಗ್ರಹ.
ರಾಜ್ಯದಲ್ಲಿ ಕನ್ನಡಿಗರಿಗೆ ಅವಮಾನ ಮಾಡುತ್ತಿರುವ ಶಿವಸೇನೆ ಹಾಗೂ ಎಂಇಎಸ್ ಸಂಘಟನೆಯ ನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ರಕ್ಷಣಾ ವೇದಿಕೆಯ ಸಂಘಟನೆಯ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟಿಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಎಂಇಎಸ್ ಸಂಘಟನೆಯಲ್ಲಿ ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯ ಕೆ ಎನ್ ಮಂಜುನಾಥ್ ಗೌಡರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಿಗಳು ಎಂ ಇ ಎಸ್ ಸಂಘಟನೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಎಂಇಎಸ್ ಹಾಗೂ ಶಿವಸೇನೆಯ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಸಂಘಟನೆಯ ಪದಾಧಿಕಾರಿಗಳು ಎಂಇಎಸ್ ಹಾಗೂ ಶಿವಸೇನೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯ ಕೆ ಎನ್ ಮಂಜುನಾಥ್ ಗೌಡ ಮಾತನಾಡಿ ತಾಯ್ನಾಡಿಗಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಗಿದೆ ಇಡಿ ಮನುಕುಲಕ್ಕೆ ಕಾಯಕಧರ್ಮ ನನ್ನು ನೀಡಿದ ಮಹಾ ಮಾನವತಾವಾದಿ ಸರ್ವಜ್ಞ ಬಸವಣ್ಣ ನವರ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ ಕರ್ನಾಟಕದ ಕನ್ನಡಿಗರ ಆತ್ಮಾಭಿಮಾನದ ಪ್ರತಿಕವಾಗಿರುವ ಕನ್ನಡ ಧ್ವಜಕ್ಕೆ ಬೆಂಕಿ ಇಡಲಾಗಿದೆ ರಾಜ್ಯದಲ್ಲಿ ಎಂಇಎಸ್ ಹಾಗೂ ಶಿವಸೇನೆಯ ಪುಂಡಾಟಿಕೆ ರಾಜ್ಯದಲ್ಲಿ ಹೆಚ್ಚಾಗಿದ್ದು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ ಹಾಗಾಗಿ ಕೂಡಲೇ ರಾಜ್ಯದಲ್ಲಿ ಶಿವ ಸೇನೆ ಸಂಘಟನೆಯನ್ನು ಸಂಪೂರ್ಣ ನಿಷೇಧ ಮಾಡಬೇಕು ಎನ್ನುವುದು ರಾಜ್ಯದ ಜನತೆಯ ಒಕ್ಕೊರಲ ಅಭಿಪ್ರಾಯವಾಗಿದೆ ಹಾಗಾಗಿ ಎಂಇಎಸ್ ಹಾಗೂ ಶಿವಸೇನೆ ರಾಜ್ಯದಲ್ಲಿ ಸಂಪೂರ್ಣ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ವರದಿ _ವಿಜಯ ಭಾರತ ನ್ಯೂಸ್ ಡೆಸ್ಕ್