ತುಮಕೂರು ನಗರದ ಕೂತಿತೋಪು ಪ್ರಾರ್ಥಮಿಕ ಆರೋಗ್ಯ ಕೇಂದ್ರ ತುಮಕೂರು ನಗರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ರಾಜ್ಯ ಸರ್ಕಾರದ ವತಿಯಿಂದ ನೀಡುವ ಕಾಯಕಲ್ಪ ಪ್ರಶಸ್ತಿ ಪಡೆದಿದೆ.
ರಾಜ್ಯ ಆರೋಗ್ಯ ಇಲಾಖೆಯ ಸಿಬ್ಬಂದಗಳು ಇತ್ತೀಚೆಗೆ ನಗರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೇ ಬೇಟಿ ನೀಡಿ ಆರೋಗ್ಯ ಕೇಂದ್ರಗಳಲ್ಲಿ ನೀಡುವ ಸೌಲಭ್ಯಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕ .ತುಮಕೂರು ನಗರದ ಕೊತಿತೋಪು ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಉತ್ತಮ ಸೇವೆ, ಸ್ವಚ್ಛತೆಗೆ ಹೆಚ್ಚು ಆದ್ಯತೆ, ಮೆಡಿಕಲ್ ತ್ಯಾಜ್ಯಗಳ ವಿಲೇವಾರಿ, ವಿವಿಧ ಲಸಿಕೆಗಳ ನೀಡುವಿಕೆ, ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ, ರೋಗಿಗಳೊಂದಿಗೆ ಉತ್ತಮ ಒಡನಾಟ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸುವಲ್ಲಿ ತುಮಕೂರು ನಗರದ ಕೋತಿತೋಪು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾನ ಪಡೆಯುವ ಮೂಲಕ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿರುವುದು ಹೆಮ್ಮೆಯ ವಿಷಯವಾಗಿದೆ.
ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾಕ್ಟರ್ ಮಹೇಶ್ ಮಾತನಾಡಿ ಇಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳು ಎಂದರೆ ಜನರ ಚಿಕಿತ್ಸೆ ಪಡೆಯಲು ಹಿಂಜರಿಯುತ್ತಾರೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಸೌಲಭ್ಯಗಳನ್ನು ಒದಗಿಸುತ್ತಿವೆ ಅಂತ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು . ನಮ್ಮಆರೋಗ್ಯ ಕೇಂದ್ರಕ್ಕೆ ಬಂದಿರುವ ಕಾಯಕಲ್ಪ ಪ್ರಶಸ್ತಿಯಿಂದ ನಮಗೆ ಹೆಚ್ಚಿನ ಜವಾಬ್ದಾರಿ ಬಂದಂತಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಚಿಕಿತ್ಸೆ ಹಾಗೂ ಉತ್ತಮ ಸೌಲಭ್ಯಗಳನ್ನು ಒದಗಿಸುತ್ತೇವೆ .ಪ್ರಶಸ್ತಿ ಸಿಗಲು ಕಾರಣರಾದ ನಮ್ಮ ಆರೋಗ್ಯ ಸಿಬ್ಬಂದಿಗಳು ಹಾಗೂ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ಸ್ಪಂದಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.