ತಿಪಟೂರಿನ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ.
ತಿಪಟೂರು – 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಭಾನುವಾರ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಸೋಮೆಕಟ್ಟೆಯ ಕಾಡು ಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದರು.
ಭಾನುವಾರ ತಮ್ಮ ಕುಟುಂಬ ಸದಸ್ಯರೊಂದಿಗೆ ಮಠಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಮಠದ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.
ಸಂಕಷ್ಟ ಸಮಯದಲ್ಲಿ ಮಠಕೆ ಭೇಟಿ ನೀಡುವ ಡಿ.ಕೆ ಶಿವಕುಮಾರ್.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇದೆ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡುತ್ತಿಲ್ಲ ಇನ್ನು ಅವರು ಮಠಕ್ಕೆ ಭಕ್ತರಾಗಿದ್ದು ಅವರು ತಮ್ಮ ಎಲ್ಲಾ ಸಂಕಷ್ಟ ಕಾಲದಲ್ಲೂ ಸಹ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುತ್ತಾರೆ.
ಇನ್ನು ಸಿಎಂ ರೇಸ್ ನಲ್ಲಿ ಪ್ರಮುಖರಾಗಿರುವ ಡಿ.ಕೆ ಶಿವಕುಮಾರ್ ಅವರು ತಾವು ಸಹ ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮಠಕ್ಕೆ ಬೇಟಿ ನೀಡಿದ್ದು ತೀವ್ರ ಸಂಚಲನಕ್ಕೆ ಕಾರಣವಾಗಿದೆ.