ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸತತವಾಗಿ ಪ್ರಥಮ ಸ್ಥಾನದಲ್ಲಿ ಬರುವಂತೆ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಎದುರಿಸಿ ಹೆಚ್ಚು ಅಂಕಗಳನ್ನು ಪಡೆಯುವಂತೆ ಆಗಬೇಕು ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.
ದೇವನಹಳ್ಳಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದರು. ಮಕ್ಕಳು ಸುಲಲಿತವಾಗಿ ಯಾವುದೇ ಗೊಂದಲವಿಲ್ಲದೆ, ಭಯವಿಲ್ಲದೆ ಪರೀಕ್ಷೆಯನ್ನು ಬರೆಯಿರಿ. ಉತ್ತಮ ಅಂಕಗಳನ್ನು ಪಡೆದು ನಮ್ಮ ತಾಲೂಕು, ಜಿಲ್ಲೆ, ರಾಜ್ಯಕ್ಕೆ ಹೆಸರು ತರುವಂತೆ ಆಗಬೇಕು. ಶಾಸಕನಾದ ಮೂರು ವರ್ಷದಲ್ಲಿ ಕಾಲೇಜುಗಳಲ್ಲಿ, ಶಾಲೆಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ಮಕ್ಕಳು ಹೆಸರು ತಂದಿರುತ್ತಾರೆ. ಇಂತಹ ಕ್ಷೇತ್ರದಲ್ಲಿ ಮಕ್ಕಳ ಸೇವೆ ಮಾಡಲು ಪುಣ್ಯ ಸಿಕ್ಕಿದಂತೆ ಆಗಿದೆ. ಪೋಷಕರು ಕಷ್ಟಪಟ್ಟು ಮಕ್ಕಳ ಶೈಕ್ಷಣಿಕ ಮಟ್ಟ ಸುಧಾರಿಸಲು ಅವರಿಗೆ ಪ್ರೋತ್ಸಾಹ ನೀಡುವಂತೆ ಆಗಬೇಕು. ಇಲ್ಲಿನ ಶಿಕ್ಷಕರು ಸಹ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದು, ಅವರ ಶೈಕ್ಷಣಿಕ ಸುಧಾರಣೆಗೆ ಹೆಚ್ಚು ಶ್ರಮಿಸುತ್ತಿದ್ದಾರೆ. ಮಕ್ಕಳಿಗೆ ಅನುಕೂಲವಾಗಲು ಲಯನ್ಸ್ ಸಂಸ್ಥೆ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹ ಸಹಕಾರ ನೀಡುತ್ತಿದೆ. ತಾಲೂಕಿನ ಜನತೆಯ ಪರವಾಗಿ ತಾವು ಸಹ ನಿಮ್ಮ ಜೊತೆಯಲ್ಲಿರುತ್ತೇವೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಿಯನ್ನು ಬರೆಯುವ ಮಕ್ಕಳಿಗೆ ಶುಭಕೋರುತ್ತೇನೆ ಎಂದರು.
ಈ ವೇಳೆಯಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಲಕ್ಷ್ಮೀನಾರಾಯಣ್, ಬಿಇಒ ಅಶ್ವತ್‌ನಾರಾಯಣ್, ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್, ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು, ಮತ್ತಿತರರು ಇದ್ದರು.
ಹೈದರ್ ಸಾಬ್ ದೇವನಹಳ್ಳಿ