ಕಂಬಳವನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ*

*ಕಂಬಳವನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ*

 

 

 

 

 

 

 

ಪುಂಜಾಲಕಟ್ಟೆ: ಕಂಬಳ ಕ್ರೀಡೆಗೆ ಹೆಚ್ಚಿನ ಪ್ರಚಾರ ನೀಡಿ ಅದನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕಾಗಿದೆ. ಇದಕ್ಕೆ ಸರಕಾರದ ಬೆಂಬಲವೂ ಇದೆ ಎಂದು ರಾಜ್ಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು.

ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ನಡೆದ ವೀರ-ವಿಕ್ರಮ ಜೋಡುಕರೆ ಕಂಬಳದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕೋಣದ ಜೊತೆ ಓಡುವುದು ಸಾಮಾನ್ಯ ಕಾರ್ಯವಲ್ಲ. ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಸಮಾನರಾದ ಕ್ರೀಡಾಪಟುಗಳು ಕಂಬಳ ಕ್ಷೇತ್ರದಲ್ಲಿದ್ದಾರೆ. ಕಂಬಳದ ಓಟಗಾರರನ್ನು ಸಮ್ಮಾನಿಸುವ ಅವಕಾಶ ಸಿಕ್ಕಿರುವುದು ಖುಷಿ ಕೊಟ್ಟಿದೆ ಎಂದರು.

ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಸಮಯದ ಮಿತಿ ನಿಗದಿ ಪಡಿಸುವುದು ಸರಿಯಲ್ಲ, ಕೋವಿಡ್ ಸೋಂಕು 10 ಗಂಟೆಯವರೆಗೆ ಬರುತ್ತದೆ, ಬಳಿಕ ಬರುವುದಿಲ್ಲ ಎನ್ನುವ ಮೂಢನಂಬಿಕೆ ಬೇಡ.ಬೆಳಗ್ಗೆವರೆಗೆ ಕಂಬಳ ನಡೆಯಲಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅವರು ತಿಳಿಸಿದರು.

 

ಲಕ್ಷಾಂತರ ಜನರು ವೀಕ್ಷಿಸುವ ಕಂಬಳಾಭಿಮಾನಿಗಳಿಗೆ ಸರಕಾರ ಹಾಗೂ ಅಧಿಕಾರಿಗಳಿಗೆ ನಿರಾಸೆ ಮಾಡುವುದಿಲ್ಲ. ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮುಂದಿನ ಕಂಬಳಕ್ಕೆ ಸರಕಾರದಿಂದ ಸಹಾಯಧನ ಕೊಡಿಸುವುದಾಗಿ ಭರವಸೆ ನೀಡಿದ ಅವರು ವೈಯಕ್ತಿಕವಾಗಿ 11 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.

ಶಾಸಕರಾದ ಕುಮಾರ್ ಬಂಗಾರಪ್ಪ, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಜಿ. ಪಂ. ಸದಸ್ಯ ತುಂಗಪ್ಪ ಬಂಗೇರ, ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಶಶಿಕಾಂತ್ ಸವದಿ, ಧೀರಜ್ ಪ್ರಸಾದ್, ಕ.ನ.ಸ. ಒಳಚರಂಡಿ ಮಂಡಳಿಯ ನಿರ್ದೇಶಕಿ ಸುಲೋಚನಾ ಭಟ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

ಈ ಸಂದರ್ಭದಲ್ಲಿ ಕಂಬಳ ಕ್ಷೇತ್ರದಲ್ಲಿ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ರಾದ ಶ್ರೀನಿವಾಸ ಗೌಡ, ಸುರೇಶ್ ಎಂ. ಶೆಟ್ಟಿ, ಪ್ರವೀಣ್ ಕೋಟ್ಯಾನ್ ಅವರನ್ನು ಸಚಿವರು ಸಮ್ಮಾನಿಸಿದರು.ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಸ್ವಾಗತಿಸಿದರು. ಗುಣಪಾಲ ಕಡಂಬ ಪ್ರಾಸ್ತಾವಿಕವಾಗಿ ಮಾತನಾಡಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!