ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ

 

ಮೈಸೂರು ನಗರದಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಚಾಮುಂಡಿಬೆಟ್ಟದ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗಿದ್ದು , ದುರಸ್ಥಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ ನೀಡಿದ್ದಾರೆ .

ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ .

ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ , ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು . ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ , ದುರಸ್ಥಿ ಕಾರ್ಯವನ್ನು ಕೈಗೊಳ್ಳಬೇಕು . ಆದಷ್ಟು ಶೀಘ್ರದಲ್ಲಿ ಬಂದು ಪರಿಶೀಲಿಸಲಿದ್ದು , ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ಪ್ರವಾಸಿಗರಿಗೆ ತೆಗೆದುಕೊಂಡು ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದ್ದಾರೆ .

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version