ಕ್ಷೇತ್ರದ ಜನರು ಹಾಗೂ ಕಾರ್ಯಕರ್ತರೊಂದಿಗೆ ಚಲನಚಿತ್ರ ವೀಕ್ಷಿಸಿದ ಶಾಸಕರು.

ಕ್ಷೇತ್ರದ ಜನರು ಹಾಗೂ ಕಾರ್ಯಕರ್ತರೊಂದಿಗೆ ಚಲನಚಿತ್ರ ವೀಕ್ಷಿಸಿದ ಶಾಸಕರು.

 

ತುಮಕೂರು_ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಭಿನಯಿಸಿರುವ ಬಹುನಿರೀಕ್ಷೆಯ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ರೈಡರ್ ಚಲನಚಿತ್ರವನ್ನು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ. ಸಿ. ಗೌರಿಶಂಕರ್ ರವರು ಕ್ಷೇತ್ರದ ಜನರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ವೀಕ್ಷಿಸಿ ಸಂಭ್ರಮಿಸಿದರು.

 

ಮಂಗಳವಾರ ತುಮಕೂರು ಗ್ರಾಮಾಂತರ ಶಾಸಕರಾದ ಡಿ.ಸಿ ಗೌರಿಶಂಕರ್ ರವರು ತುಮಕೂರಿನ ಗಾಯತ್ರಿ ಚಿತ್ರಮಂದಿರಕ್ಕೆ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಚಲನಚಿತ್ರವನ್ನು ವೀಕ್ಷಿಸಿದರು ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರೈಡರ್ ಸಿನಿಮಾ ಬಹಳ ಚೆನ್ನಾಗಿ ಮೂಡಿ ಬಂದಿದ್ದು ಸಮಾಜಕ್ಕೆ ಒಂದು ಒಳ್ಳೆಯ ಸಂದೇಶವನ್ನು ರವಾನಿಸಲಾಗಿದೆ ಇನ್ನೂ ಚಲನಚಿತ್ರದಲ್ಲಿ ದತ್ತು ಪಡೆದ ಮಗುವನ್ನು ಉತ್ತಮ ರೀತಿಯಲ್ಲಿ ಬೆಳೆಸಿ ಸಮಾಜಕ್ಕೆ ಒಂದು ದೊಡ್ಡ ಆಸ್ತಿಯನ್ನಾಗಿ ಮಾಡಬಹುದು ಎಂಬುದನ್ನ ಚಲನಚಿತ್ರದಲ್ಲಿ ಚೆನ್ನಾಗಿ ತೋರಿಸಿದ್ದಾರೆ ಎಂದು ರೈಡರ್ ಸಿನಿಮಾಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ.

 

 

ಇದೇ ಸಂದರ್ಭದಲ್ಲಿ ತುಮಕೂರು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್. ಸಿ ಆಂಜನಪ್ಪ, ಜೆಡಿಎಸ್ ಪಕ್ಷದ ಮುಖಂಡ ಟಿ.ಆರ್ ನಾಗರಾಜು, ತುಮಕೂರು ಮಹಾನಗರ ಪಾಲಿಕೆ ಕಾರ್ಪೊರೇಟರ್ ಮಂಜುನಾಥ್ ಸೇರಿದಂತೆ ಜೆಡಿಎಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಮುಖಂಡರು ಹಾಗೂ ಕ್ಷೇತ್ರದ ಜನರು ಶಾಸಕರೊಂದಿಗೆ ಚಲನಚಿತ್ರ ವೀಕ್ಷಿಸಿದ್ದಾರೆ.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version