ತಾಲೂಕಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು ಮೇಲುಗೈ

ತಾಲೂಕಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು ಮೇಲುಗೈ

 

 

 

ಜೆಡಿಎಸ್‌ನವರು ಕುಮಾರಸ್ವಾಮಿ ಮನವೊಲಿಸಲು ಗ್ರಾಪಂ ಅಭ್ಯರ್ಥಿಗಳ ಹೆಚ್ಚು ಗೆಲುವು ಆಗಿದೆ ಎಂದು ಹೇಳುವುದು ಸತ್ಯಕ್ಕೆ ದೂರವಾದ ಮಾತು

 

ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ೪೩೬ ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಅದರಲ್ಲಿ ೨೧೩ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಪಂ ಚುನಾವಣೆಯಲ್ಲಿ ಗೆದ್ದಿದ್ದಾರೆ. ೧೭೦ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಮಾಜಿ ಶಾಸಕ ಮುನಿನರಸಿಂಹಯ್ಯ ಸ್ಪಷ್ಟಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು. ಮೊನ್ನೆ ನಡೆದ ಗ್ರಾಪಂ ಚುನಾವಣೆಯಲ್ಲಿ ೨೫ ಗ್ರಾಪಂಗಳಲ್ಲಿ ೧೦ ಪಂಚಾಯಿತಿಯಲ್ಲಿ ಸ್ಪಷ್ಟ ಬಹುಮತ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ್ದಾಗಿದೆ. ಉಳಿದ ೬ ಗ್ರಾಮ ಪಂಚಾಯಿತಿ ಜೆಡಿಎಸ್ ಪಂಚಾಯಿತಿಗಳಾಗಿವೆ. ಇನ್ನುಳಿಕೆ ೯ ಪಂಚಾಯಿತಿಗಳಲ್ಲಿ ಅತಂತ್ರದಲ್ಲಿವೆ. ಜೆಡಿಎಸ್‌ನವರು ಕುಮಾರಸ್ವಾಮಿ ಮನವೊಲಿಸಲು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಹೆಚ್ಚು ಗೆಲುವು ಆಗಿದೆ ಎಂದು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಮಾತಾಗಿದೆ ಎಂದು ಹೇಳಿದರು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಈಗಾಗಲೇ ಚುನಾವಣೆ ನಡೆದು ಅಧಿಕಾರ ಮಾಡುತ್ತಿರುವ ನಾಲ್ಕು ಪಂಚಾಯಿತಿಗಳು ಕಾಂಗ್ರೆಸ್ ವಶದಲ್ಲಿದೆ. ಯಾವುದೇ ಗೊಂದಲವನ್ನು ಉಂಟು ಮಾಡದೆ, ೧೦ ಪಂಚಾಯಿತಿ ಕಾಂಗ್ರೆಸ್ ದಕ್ಕೆಯಲ್ಲಿದೆ ಎಂದು ಹೇಳಿದರು.

 

ವಿಧಾನಸಭಾ ಕ್ಷೇತ್ರದಲ್ಲಿ ೬೮ ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸುಂದರೇಶ್(ಸುನೀ) ಮಾದ್ಯಮಕ್ಕೆ ಮಾಹಿತಿ ನೀಡಿದರು.

 

ಇದೇ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್, ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್‌ಗೌಡ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಜಿಪಂ ಸದಸ್ಯ ಕೆ.ಸಿ.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ತಾಲೂಕು ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಬಿದಲೂರು ಗ್ರಾಪಂ ಮಾಜಿ ಅಧ್ಯಕ್ಷ ಮುನಿರಾಜ್, ಕಸಬಾ ಹೋಬಳಿ ಅಧ್ಯಕ್ಷ ಗೋಪಾಲಸ್ವಾಮಿ, ಮುಖಂಡರಾದ ಚನ್ನಹಳ್ಳಿ ರಾಜಣ್ಣ, ದಿನ್ನೂರು ವೆಂಕಟೇಶ್, ಕೋದಂಡರಾಮು, ಸೋಮಶೇಖರ್, ಕಾಂಗ್ರೆಸ್ ಮುಖಂಡರು ಮತ್ತಿತರರು ಇದ್ದರು.

 

ದೇವನಹಳ್ಳಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು.

ಗುರುಮೂರ್ತಿ ಬೂದಿಗೆರೆ

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version