ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಮೂರು ಜನ ಮೃತ

 

ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಮೊರು ಜನ ಮೃತಪಟ್ಟಿದ್ದು ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.

 

ಎಮ್ಮೆಗಳನ್ನು ತುಂಬಿಕೊಂಡು ಹುಬ್ಬಳ್ಳಿಯಿಂದ ಸೋಲಾಪುರ ಕಡೆಗೆ ಹೊರಟಿದ್ದ ಕ್ಯಾಂಟರ್ ಹಾಗೂ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿದ್ದ ಹತ್ತು ಎಮ್ಮೆಗಳೂ ಅಪಘಾತದ ರಭಸಕ್ಕೆ ವಾಹನದ ಒಳಗೇ ಜೀವ ಕಳೆದುಕೊಂಡಿವೆ.

 

ಲಾರಿಯಲ್ಲಿ ಸಿಲುಕಿದವರನ್ನು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹೊರತೆಗೆಯುವ ಕಾರ್ಯಾಚರಣೆ ನಡೆಸಿದರು. ಗಂಭೀರ ಗಾಯಗೊಂಡಿರುವ ಕೆಲವರನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಕೊಲ್ಹಾರ ಠಾಣಾ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಈ ಘಟನೆ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಿಸಿದೆ . 

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version