ರಾಜ್ಯ ರಾಜಕಾರಣದ ಬೆಳವಣಿಗೆಗೆ ಮಾಧುಸ್ವಾಮಿ ಬೇಸರ.

 

 

ಬಿಜೆಪಿ ವರಿಷ್ಠರಾದ ಅರುಣ್ ಸಿಂಗ್ ರವರು ರಾಜ್ಯ ಭೇಟಿಗಾಗಿ ಆಗಮಿಸಿದ್ದು . ಸಿಎಂ ಕುರ್ಚಿಗೆ ತೆರೆಮರೆಯ ಆಟಗಳು ಚಿಗುರಿಕೊಂಡ ಬೆನ್ನಲ್ಲೇ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಮಾಧುಸ್ವಾಮಿ ಅವರು ರಾಜ್ಯದ ಜನತೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಪರಿತಪಿಸುತ್ತಿದ್ದಾರೆ ಆದರೆ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆಯ ಬಗ್ಗೆ ಸಚಿವ ಮಾಧುಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

 

ಕರೋನ ಸಂಕಷ್ಟ ಕಾಲದಲ್ಲಿ ನಮ್ಮ ಪಕ್ಷ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ .

 

ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಮಾಧುಸ್ವಾಮಿ ರವರು ಇಂದು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಸಂಚಲನದ ಬಗ್ಗೆ ಆಸಕ್ತಿ ಇಲ್ಲ ಅದರ ಬಗ್ಗೆ ಆಸಕ್ತಿ ಇದ್ದಿದ್ದರೆ ತಾನು ಬೆಂಗಳೂರಿನಲ್ಲಿ ಇರುತ್ತಿದ್ದೆ. ಆದ್ದರಿಂದ ಆಸಕ್ತಿ ಇಲ್ಲದ ಕಾರಣ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ವಾಪಸ್ ಬಂದಿರುವುದಾಗಿ ತಿಳಿಸಿದರು.

 

ಇನ್ನು ಬುಧವಾರ ನಡೆದ ಸಚಿವ ಸಂಪುಟ ಸಹೋದ್ಯೋಗಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು ನಮ್ಮ ಅಭಿಪ್ರಾಯವನ್ನು ಯಾರೂ ಕೇಳಲಿಲ್ಲ . ವಿಜಯೇಂದ್ರ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಮಾತನಾಡುವುದಿಲ್ಲ ಎಂದರು.

 

 

ಏನೇ ಇರಲಿ ಆದರೆ ಇಂತಹ ಸಮಯದಲ್ಲಿ ಇಂತಹ ಬೆಳವಣಿಗೆಗಳು ಆಗಬಾರದಿತ್ತು ಆಗಿರುವುದು ತಪ್ಪು ಎನ್ನುವ ಮೂಲಕ ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!