ವಿಧಾನಪರಿಷತ್ ಚುನಾವಣೆ ಒಗ್ಗಟ್ಟು ಪ್ರದರ್ಶಿಸಿದ ತುಮಕೂರು ಮಹಾನಗರ ಪಾಲಿಕೆ ಜೆಡಿಎಸ್ ಸದಸ್ಯರು.
ರಾಜ್ಯಾದ್ಯಂತ ಇಂದು 25 ಕ್ಷೇತ್ರಗಳಿಗೆ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆಯಿತು.
ಇದಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯನ್ನು ಸಹ ವಿಧಾನಪರಿಷತ್ ಚುನಾವಣೆಯ ಅಕಾಡ ರಂಗೇರಿದ್ದು ಎಲ್ಲಾ ಪಕ್ಷದ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಮತ ಹಾಕಿಸಲು ಸಾಕಷ್ಟು ಗೌಪ್ಯತೆ ಕಾಪಾಡಿಕೊಂಡರು .
ಇನ್ನು ನಮ್ಮ ಪಕ್ಷದ ಮತದಾರರಿಗೆ ಬೇರೆ ಪಕ್ಷದ ಅಭ್ಯರ್ಥಿಗಳು ಎಲ್ಲಿ ಗಾಳ ಹಾಕುವರೋ ಎನ್ನುವ ಆತಂಕದಲ್ಲಿದ್ದ ತುಮಕೂರು ಮಹಾನಗರ ಪಾಲಿಕೆ ಜೆಡಿಎಸ್ ಸದಸ್ಯರು ಒಂದೇ ಬಾರಿಗೆ ಒಗ್ಗಟ್ಟಾಗಿ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಮಹಾನಗರಪಾಲಿಕೆ ಜೆಡಿಎಸ್ ಪಕ್ಷದ ಕಾರ್ಪೊರೇಟರ್ ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ಒಳ್ಳೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಜಿಲ್ಲೆಯಾದ್ಯಂತ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿನ ವಾತಾವರಣ ನಿರ್ಮಾಣವಾಗಿದೆ ಇನ್ನು ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್ ಡಿ ದೇವೇಗೌಡ ರವರು ಹಾಗೂ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಮುಖಂಡರು ಹಾಲಿ ಶಾಸಕರು ಮಾಜಿ ಶಾಸಕರು ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ 300ರಿಂದ 400 ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕಾರ್ಪೊರೇಟರ್ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಉಪಮೇಯರ್ ಹಾಗೂ ಜೆಡಿಎಸ್ ಪಾಲಿಕೆ ಸದಸ್ಯರಾದ ನಾಜಿಮಾಬಿ ,ಜೆಡಿಎಸ್ ಕಾರ್ಪೊರೇಟರ್ ಹಾಗೂ ಮುಖಂಡರಾದ ನಾಗರಾಜು, ಮನು, ಧರಣೇಂದ್ರ, ಲಲಿತಾ ರವೀಶ್ , ಶಶಿಕಲಾ ಸೇರಿದಂತೆ ಎಲ್ಲಾ ಜೆಡಿಎಸ್ ಕಾರ್ಪೋರೇಟರ್ ಗಳು ಒಂದೇ ಬಾರಿಗೆ ಮತ ಚಲಾಯಿಸುವ ಮೂಲಕ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.