ವಿಧಾನ ಪರಿಷತ್ ಚುನಾವಣೆ: ಸಕಲ ಸಿದ್ಧತೆ-ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣೆ: ಸಕಲ ಸಿದ್ಧತೆ-ಜಿಲ್ಲಾಧಿಕಾರಿ

ತುಮಕೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ ೧೦ರಂದು ಬೆಳಿಗ್ಗೆ ೮ ರಿಂದ ಸಂಜೆ ೪ ಗಂಟೆಯವರೆಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಸಂಬoಧಿಸಿದoತೆ ಮತದಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು ೩೩೮ ಮತಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ೧೯೪ ಸಾಮಾನ್ಯ, ೯೫ ಸೂಕ್ಷö್ಮ ಹಾಗೂ ೪೯ ಅತಿಸೂಕ್ಷö್ಮ ಮತಕೇಂದ್ರಗಳೆoದು ಗುರುತಿಸಲಾಗಿದೆ. ಸೂಕ್ಷö್ಮ ಹಾಗೂ ಅತಿಸೂಕ್ಷö್ಮ ಮತ ಕೇಂದ್ರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲಿಯೂ ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಈ ಚುನಾವಣೆಯಲ್ಲಿ ೨೬೨೩ ಪುರುಷರು ಹಾಗೂ ೨೯೩೬ ಮಹಿಳೆಯರು ಸೇರಿದಂತೆ ಒಟ್ಟು ೫೫೫೯ ಮತದಾರರು ಮತದಾನ ಮಾಡಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪ್ರತಿ ಮತಕೇಂದ್ರಕ್ಕೂ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾರರನ್ನು ಗುರುತು ಹಚ್ಚುವ ಅಧಿಕಾರಿಗಳು ಹಾಗೂ ವೀಕ್ಷಕರು ಸೇರಿದಂತೆ ಒಟ್ಟು ೧೨೦೦ ಅಧಿಕಾರಿ/ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡ್ ನಿಯಮಾವಳಿಗಳನ್ವಯ ಮತದಾನದ ಹಿಂದಿನ ದಿನವೇ ಮತಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಮತದಾನ ಕೇಂದ್ರದ ಒಳಗೆ ಮತದಾರರು ಬರುವಾಗ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ, ಮಾಸ್ಕ್ ಧರಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಆಶಾ ಕಾರ್ಯಕರ್ತೆಯರು/ಎಎನ್‌ಎಂಗಳನ್ನು ನಿಯೋಜಿಸಲಾಗಿದೆ ಎಂದರಲ್ಲದೆ ಮತಚಲಾವಣೆಗೆ ಬರುವ ಎಲ್ಲಾ ಮತದಾರರು ಕಡ್ಡಾಯವಾಗಿ ಕನಿಷ್ಟ ಮೊದಲ ಡೋಸ್ ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಕೋವಿಡ್ ಪ್ರಕರಣಗಳ ಕುರಿತು ಸುದ್ದಿಗಾರರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ನಗರದ ಸಿದ್ಧಗಂಗಾ ಹಾಗೂ ವರದರಾಜ ನರ್ಸಿಂಗ್ ಕಾಲೇಜಿನ ಒಟ್ಟು ೧೫ ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕಳೆದ ವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗಿ ೧ ಅಥವಾ ೨ ಪ್ರಕರಣಗಳು ಮಾತ್ರ ವರದಿಯಾಗಿದೆ ಎಂದರಲ್ಲದೆ, ಜಲ್ಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ. ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದರೂ ಸಹ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಮುನ್ನೆಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಥಾಧಿಕಾರಿ ರಾಹುಲ್ ಕುಮಾರ್ ಷಹಪುರವಾಡ್ ಮಾತನಾಡಿ ವಿಧಾನ ಪರಿಷತ್ ಚುನಾವಣೆಗೆ ಸಂಬoಧಿಸಿದoತೆ ಎಲ್ಲಾ ೩೩೮ ಮತ ಕೇಂದ್ರಗಳಲ್ಲಿಯೂ ಶಾಂತಿಯುತ ಮತದಾನಕ್ಕಾಗಿ ಸುಮಾರು ೬೦೦ ಮಂದಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಈಗಾಗಲೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!