ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಡ್ಯಾಮ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಸಂಸದರಾದ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರ ನಡುವೆ ಡ್ಯಾಮ್ ವಿಚಾರಕ್ಕೆ ಸಂಬಂಧಪಟ್ಟಂತೆ ತೀವ್ರ ವಾಕ್ಸಮರ ನಡೆಯುತ್ತಿದೆ ಇನ್ನು ರಾಜ್ಯದ ಡ್ಯಾಮ್ ಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಂಡ್ಯ ಜಿಲ್ಲೆಯ ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದ ರಾದ ಸುಮಲತಾ ಅವರು ಆರೋಪಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು ಆ ಭಾಗದ ರೈತರ ಒಡನಾಡಿಯಾಗಿರುವ ಕೆಆರ್ ಎಸ್ ಡ್ಯಾಮ್ ಬಳಿಯಿರುವ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆ ಕಾರಣವಾಗಿದೆ ಎಂದು ಮಂಡ್ಯ ಸಂಸದೆ ಸುಮಲತಾ ರವರು ಆರೋಪಿಸಿದ ಬೆನ್ನಲ್ಲೇ.
ಇಂದು ತುಮಕೂರು ಜಿಲ್ಲೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಯೋಜನಾ ಇಲಾಖೆಯ ಸಚಿವರಾದ ಕೆ. ಸಿ ನಾರಾಯಣಗೌಡ ಅವರು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಗೆ ಸಂಬಂಧಪಟ್ಟಂತೆ ಮಾಹಿತಿ ಪಡೆದರು .
ಈ ವಿಚಾರಕ್ಕೆ ಸಂಬಂಧಪಟ್ಟಂತೆ ತುಮಕೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು ಮಂಡ್ಯ ಜಿಲ್ಲೆಯ ಕೆಆರ್ ಎಸ್ ಡ್ಯಾಮ್ ಯಾವುದೇ ಕಾರಣಕ್ಕೂ ಬಿರುಕು ಬಿಟ್ಟಿಲ್ಲ ಇದು ಕೇವಲ ಊಹಾಪೋಹವಷ್ಟೆ ಎನ್ನುವ ಮೂಲಕ ತೆರೆ ಎಳೆದಿದ್ದಾರೆ
ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದ್ದರೆ ಆ ಭಾಗದ ರೈತರು ನನ್ನನ್ನು ಸುಮ್ಮನೆ ಬಿಡುತ್ತಿದ್ದರೆ ಹಾಗೂ ಆ ಭಾಗದ ರೈತರು ನೆಮ್ಮದಿಯಿಂದ ಇರಲು ಸಾಧ್ಯವೇ ಇದು ಸತ್ಯಕ್ಕೆ ದೂರವಾಗಿದ್ದು ಕೆ ಆರ್ ಎಸ್ ಡ್ಯಾಮ್ ಭದ್ರವಾಗಿದೆ ಎನ್ನುವ ಮೂಲಕ ಸ್ಪಷ್ಟನೆ ನೀಡಿದರು .