ಕೊನೆಗೂ ರಾಜೀನಾಮೆ ಘೋಷಿಸಿದ ಸಚಿವ ಕೆ.ಎಸ್. ಈಶ್ವರಪ್ಪ

ಕೊನೆಗೂ ರಾಜೀನಾಮೆ ಘೋಷಿಸಿದ ಸಚಿವ ಕೆ.ಎಸ್. ಈಶ್ವರಪ್ಪ

 

ಬೆಂಗಳೂರು_ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕೊನೆಗೂ ಕೆ.ಎಸ್.ಈಶ್ವರಪ್ಪ ಅವರ ಮಂತ್ರಿ ಸ್ಥಾನ ಕಸಿದಿದೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ. 40% ಕಮಿಷನ್ ಕೊಡುವಂತೆ ಒತ್ತಾಯಿಸಿದ್ದರು ಎಂದು ನೇರ ಆರೋಪ ಮಾಡಿದ್ದ ಸಂತೋಷ್ ಮಂಗಳವಾರ ಬೆಳಗ್ಗೆ ಉಡುಪಿಯ ಲಾಡ್ಜ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.

 

ಇದಕ್ಕೂ ಮುನ್ನ ವಾಟ್ಸ್ಆ್ಯಪ್ ಮೂಲಕ ಮಾಧ್ಯಮದವರಿಗೆ ಸಂದೇಶ ರವಾನಿಸಿದ್ದ ಸಂತೋಷ್, ತಾನು ಸಾಯುತ್ತಿರುವುದಾಗಿ ಹಾಗೂ ಇದಕ್ಕೆ ಈಶ್ವರಪ್ಪ ಕಾರಣ ಎಂದೂ ದೂರಿದ್ದರು. ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದ ಈಶ್ವರಪ್ಪ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಯಾವ ತಪ್ಪನ್ನೂ ಮಾಡಿಲ್ಲ ಎಂದಿದ್ದರು.

 

ಇದಕ್ಕೂ ಮುನ್ನ ವಾಟ್ಸ್ಆ್ಯಪ್ ಮೂಲಕ ಮಾಧ್ಯಮದವರಿಗೆ ಸಂದೇಶ ರವಾನಿಸಿದ್ದ ಸಂತೋಷ ತಾನು ಸಾಯುತ್ತಿರುವುದಾಗಿ ಹಾಗೂ ಇದಕ್ಕೆ ಈಶ್ವರತ ಕಾರಣ ಎಂದೂ ದೂರಿದ್ದರು. ಆದರೆ ಇದಕ್ಕೂ ನನಗ ಯಾವುದೇ ಸಂಬಂಧ ಇಲ್ಲ ಎಂದಿದ್ದ ಈಶ್ವರಪ್ಪ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಯಾವ ತಪ್ಪನ್ನೂ ಮಾಡಿಲ್ಲ ಎಂದಿದ್ದರು.

 

 

ಸಂತೋಷ್ ಆತ್ಮಹತ್ಯೆ ಪ್ರಕರಣ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈಶ್ವರಪ್ಪನನ್ನು ಬಂಧಿಸಬೇಕು, ಮೃತನ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರು. ಇಂದೂ ಕೂಡ ಸಂತೋಷ್ ಶವ ಇಟ್ಟುಕೊಂಡು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಬೆಂಗಳೂರಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಸಿದ್ದರಾಮಯ್ಯ ಮತ್ತು ಡಿಕೆಶಿ ನೇತೃತ್ವದ ತಂಡ, ವಿಧಾನಸೌಧ ಆವರಣದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿತ್ತು. ಇಷ್ಟೆಲ್ಲಾ ಬೆಳವಣಿಗೆ ಬಳಿಕ ಕೊನೆಗೂ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version