ಕೊರಟಗೆರೆ – KSRTC ಬಸ್ ಚಾಲಕನಿಗೆ ಶಿಕ್ಷಣ ಸಚಿವ ತರಾಟೆ

 

ಕೊರಟಗೆರೆ

ಕಡ್ಡಾಯ ನಿಲುಗಡೆ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೆ ತೆರಳುತ್ತಿದ್ದ KSRTC ಬಸ್ಸನ್ನು ಅಡ್ಡಗಟ್ಟಿ ಚಾಲಕನನ್ನು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ನೀಲಗೊಂಡನಹಳ್ಳಿ ಗ್ರಾ.ಪಂ. ಇರಕಸಂದ್ರ ಕಾಲೋನಿಯಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಲ್ಲೇ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಬಸ್ಸು ನಿಲ್ಲಿಸದ  ಚಾಲಕನನ್ನು ತರಾಟೆಗೆ ತೆಗೆದುಕೊಂಡು ಬಸ್ ನಿಲ್ಲಿಸುವಂತೆ ಚಾಲಕನಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಶಿಕ್ಷಣ ಸಚಿವರು ಬೆಂಗಳೂರಿನಿಂದ ಡಾಬಸ್ ಪೇಟೆ -ಉರ್ಡಿಗೆರೆ -ಕೊರಟಗೆರೆ ಮಾರ್ಗವಾಗಿ ಮಧುಗಿರಿಗೆ ತೆರಳುತ್ತಿದ್ದರು.ಮಧುಗಿರಿಗೆ ದೂರ ತರಂಗ ಶಿಕ್ಷಣ ಅಭಿಯಾನ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ತೆರಳಲು ಅನುಕೂಲ ವಾಗುವಂತೆ ಸಾರಿಗೆ ಸಚಿವರ ಜೊತೆ ಚರ್ಚಿಸಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!