ಶಿರಾ ತಾಲೂಕಿನ ಗಡಿ ಗ್ರಾಮದ ಹಾರೋಗೆರೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಡಾಕ್ಟರ್ ಸಿಎಂ ರಾಜೇಶ್ ಗೌಡ.
ಶಿರಾ ತಾಲೂಕಿನ ಶಾಸಕರಾದ ಸಿಎಂ ರಾಜೇಶ್ ಗೌಡ ರವರು ಇಂದು ಹಾರೋಗೆರೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ನಡೆಯುತ್ತಿದೆ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಪಾಲ್ಗೊಂಡರು.
ಶಾಸಕರು ಕ್ರಿಕೆಟ್ ಆಡುವ ಮೂಲಕ ಟೂರ್ನಮೆಂಟ್ ಗೆ ಚಾಲನೆ ನೀಡಿದರು
ಇನ್ನು ಟೂರ್ನಮೆಂಟ್ ನಲ್ಲಿ ಪಾಲ್ಗೊಂಡ ನೂತನ ಶಾಸಕರು ಕ್ರಿಕೆಟ್ ಆಡುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರ ಒತ್ತಾಸೆಯ ಮೇರೆಗೆ ಗ್ರಾಮದಲ್ಲಿದ್ದ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು.
ಶಿಥಿಲಾವಸ್ಥೆ ಯಲ್ಲಿ ಇದ್ದ ಶಾಲಾ ಕಟ್ಟಡ ವೀಕ್ಷಿಸಿದ ಶಾಸಕರರು
ಇನ್ನು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ರವರು ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ ಅಂಗನವಾಡಿ ಕೇಂದ್ರ ಹಾಗೂ ಶಾಲೆಯ ಮುಂಭಾಗದಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಓವರ್ ಹೆಡ್ ಟ್ಯಾಂಕ್ ಬಗ್ಗೆ ಗಮನ ಸೆಳೆದರು. ಸುಮಾರು ವರ್ಷಗಳಿಂದ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಟ್ಟಡ ತೀರಾ ಹದಗೆಟ್ಟಿದ್ದು ಮಕ್ಕಳು ವಿದ್ಯಾಭ್ಯಾಸ ಮಾಡಲು ಹೆದರುವಂತಹ ಸ್ಥಿತಿ ನಿರ್ಮಾಣವಾಗಿದೆ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಗಡಿ ಗ್ರಾಮವಾಗಿರುವ ಹಾರೋಗೆರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ನೀದಿದ ಶಾಸಕರು ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಗಳನ್ನು ದುರಸ್ತಿ ಮಾಡಿಸಲಾಗುವುದು ಎಂದು ಭರವಸೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯರಾಮಯ್ಯ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್, ಅರುಣ ಗೌರೀಶ್, ಶೃತಿ ರಾಜಶೇಖರ್ ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು