ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗ ಯುವ ಮುಖಂಡ ನರಸಿಂಹರಾಜು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗ ಯುವ ಮುಖಂಡ ನರಸಿಂಹರಾಜು.

 

ತುಮಕೂರು_ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಕಾಂಗ್ರೆಸ್ ಯುವ ಮುಖಂಡ ನರಸಿಂಹರಾಜು ಎ. ಡಿ ರವರು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ತೆರಳಿ ತುಮಕೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ತಮ್ಮ ಅಪಾರ ಬೆಂಬಲಿಗರೊಂದಿಗೆ ತೆರಳಿ ಅರ್ಜಿ ಸಲ್ಲಿಸಿದ್ದಾರೆ.

 

 

 

ಯುವ ಕಾಂಗ್ರೆಸ್ ಘಟಕದಲ್ಲಿ ಸಕ್ರಿಯ ಕಾರ್ಯಕರ್ತ ಹಾಗೂ ಯುವ ಮುಖಂಡ ನರಸಿಂಹರಾಜು ರವರು ಹಲವು ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ನಿರ್ವಹಿಸಿದ್ದು ಮೂಲತಃ ಇಂಜಿನಿಯರ್ ಆಗಿರುವ ಅವರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

 

 

 

 

 

ಇನ್ನು ಕೊರೋನಾ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿ ಸಾರ್ವಜನಿಕರಿಗೆ ಹಲವು ಸಮಾಜ ಸೇವೆಗಳನ್ನು ಮಾಡುವ ಮೂಲಕ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಈಗ ಮುಂಬರುವ ಚುನಾವಣೆಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಯುವ ಮುಖಂಡ ನರಸಿಂಹರಾಜು ರವರಿಗೆ ಮಣೆ ಹಾಕಲಿದ್ದಾರಾ…..???? ಎಂದು ಕಾದು ನೋಡಬೇಕು.

 

 

ವರದಿ_ಮಾರುತಿ ಪ್ರಸಾದ್ ತುಮಕೂರು

 

Leave a Reply

Your email address will not be published. Required fields are marked *

You cannot copy content of this page

error: Content is protected !!