ಶಾಲಾ-ಕಾಲೇಜು ಪುನರಾರಂಭ: ಶುಕ್ರವಾರ ಮಾರ್ಗಸೂಚಿ ಬಿಡುಗಡೆ; ಸಚಿವ ಬಿ.ಸಿ.ನಾಗೇಶ್

ಶಾಲಾ-ಕಾಲೇಜು ಪುನರಾರಂಭ: ಶುಕ್ರವಾರ ಮಾರ್ಗಸೂಚಿ ಬಿಡುಗಡೆ; ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ಆ.23ರಿಂದ 9ರಿಂದ 12ನೆ ತರಗತಿ ಪುನರಾರಂಭಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಶುಕ್ರವಾರ (ಆ.13) ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

 

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಜತೆಗೆ, ಕೋವಿಡ್ ಮಾರ್ಗಸೂಚಿಗಳಾದ ಮಾಸ್ಕ್ ಬಳಕೆ, ಸ್ಯಾನಿಟೈಸರ್, ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಹಾಗಾಗಿ, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಅವರು ವಿವರಿಸಿದರು.

 

ಮಕ್ಕಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ. ಯಾವ ವಯಸ್ಸಿನವರಲ್ಲಿ ಸೋಂಕು ಹೆಚ್ಚಾಗುತ್ತಿದೆ ಮತ್ತು ಅದರ ತೀವ್ರತೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆಯಲಾಗುವುದು. ಅಲ್ಲದೆ ಕೋವಿಡ್ ಸಲಹಾ ಸಮಿತಿಯ ಸಲಹೆಯನ್ನು ಪಡೆಯಲಾಗುವುದು ಎಂದು ಹೇಳಿದರು.

ಆ.30ರಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದ್ದು, ಕೋವಿಡ್ ಸೋಂಕು ನಿಯಂತ್ರಣದಲ್ಲಿದ್ದರೆ 1ರಿಂದ 8ನೆ ತರಗತಿವರೆಗೂ ಎರಡನೆ ಹಂತದಲ್ಲಿ ಶಾಲೆ ಪ್ರಾರಂಭ ಮಾಡುವ ಬಗ್ಗೆಯೂ ಗಂಭೀರ ಚಿಂತನೆ ಮಾಡಲಾಗುವುದು ಎಂದು ಸಚಿವರು ನುಡಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version