ಕೊರನ ಹೆಚ್ಚಿರುವ ಜಿಲ್ಲೆಗಳಲ್ಲಿ ಏಪ್ರಿಲ್ 10 ರಿಂದ ಏಪ್ರಿಲ್ 20 ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5:00 ವರೆಗೆ ಜಾರಿಗೊಳಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋರೋನ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ .ಇದರ ಅನುಗುಣವಾಗಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ ನವರು ಬೆಂಗಳೂರು ನಗರ, ಮೈಸೂರು ,ಕಲಬುರಗಿ ,ಉಡುಪಿ ,ಮಂಗಳೂರು ,ತುಮಕೂರು ನಗರ ,ಮಣಿಪಾಲ್ ,ಬೀದರ್, ಬೆಳಗಾವಿ ನಗರಗಳಲ್ಲಿ 10:00 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಎಲ್ಲರೂ ಸಹಕರಿಸಲು ಕೋರಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಮಾಸ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಲಾಕ್ ಡೌನ್ ಮಾಡಬಾರದು ಎಂದರೆ ಸಾರ್ವಜನಿಕರು ಸಹಕರಿಸಿ .
ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.