ಕೋವಿಡ್-೧೯ ನಿಯಂತ್ರಣ: ಏ.೧೦ ರಿಂದ ಕೊರೋನಾ ಕರ್ಫ್ಯೂ ಜಾರಿ-ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ

 

 

 

ತುಮಕೂರು ಏ.೯: ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಯನ್ವಯ ತುಮಕೂರು ನಗರದಲ್ಲಿ ಇಂದು(ಶನಿವಾರ) ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೫ ಗಂಟೆಯವರೆಗೆ (ಏಪ್ರಿಲ್ ೧೦ರಿಂದ ೨೦ರವರೆಗೆ)ಕೊರೋನಾ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.

ಏಪ್ರಿಲ್ ೧೦ ರಿಂದ ೨೦ರವರೆಗೆ ಪ್ರತಿದಿನ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ತುಮಕೂರು ನಗರಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಆಹಾರ, ವೈದ್ಯಕೀಯ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಹೋಟೆಲ್, ಪಬ್, ಬಾರ್ ಇಂತಹ ಎಲ್ಲಾ ಕಾರ್ಯಚಟುವಟಿಕೆಗಳಿಗೆ ರಾತ್ರಿ ೧೦ ಗಂಟೆಯಿAದ ಬೆಳಿಗ್ಗೆ ೫ ಗಂಟೆಯವರೆಗೆ ಅನುಮತಿ ಇರುವುದಿಲ್ಲ. ಹಾಗೂ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ಕೊರೋನಾ ಕರ್ಫ್ಯೂ ವೇಳೆ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿ ಇದ್ದು, ಉಳಿದೆಲ್ಲಾ ಸೇವೆಗಳನ್ನು ನಿಷೇಧಿಸಲಾಗಿದೆ. ವಿವಿಧ ಆರೋಗ್ಯ ಸಂಬAಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಯ ಸಂಚಾರಕ್ಕಾಗಿ ಅನುಮತಿ ಇದೆ. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಕಾರ್ಖಾನೆ/ ಕಂಪೆನಿಗಳು/ಸAಸ್ಥೆಗಳು ಈ ಕೊರೋನಾ ಕರ್ಫ್ಯೂ ಸಮಯದಲ್ಲಿ ಯಥಾಸ್ಥಿತಿಯಂತೆ ಕಾರ್ಯ ನಿರ್ವಹಿಸಬಹುದು. ಆದರೆ ನೌಕರರು ಕರ್ಫ್ಯೂ ಅವಧಿಗಿಂತ ಮುನ್ನವೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಅವರು ತಿಳಿಸಿದರು.

ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದೆಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅಗತ್ಯ ಸೇವೆಗಳನ್ನು ನೀಡುವ ವಾಹನಗಳು, ಹೋಮ್ ಡೆಲಿವರಿ, ಇ ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದರು. ರಾತ್ರಿ ವೇಳೆಯಲ್ಲಿನ ರೈಲು, ಬಸ್ಸು ಮತ್ತು ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣ್ಕಕ್ಕೆ ಅಥವಾ ನಿಲ್ದಾಣದಿಂದ ಮನೆಗೆ ಬರುವಾಗ ಅಧಿಕೃತ ಟಿಕೆಟ್ ಆಧಾರದಲ್ಲಿ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದಿಂದ ಇನ್ನೂ ಹೆಚ್ಚಿನ ಮಾರ್ಗಸೂಚಿಗಳು ನಿಗಧಿಯಾದಲ್ಲಿ ಅವುಗಳನ್ನು ಜಾರಿಗೆ ತರಲು ಕ್ರಮವಹಿಸಲಾಗುವುದು. ನಗರದಲ್ಲಿ ಕೊರೋನಾ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಮತ್ತು ಯಾರು ಗುಂಪು ಸೇರದಂತೆ ಕ್ರಮವಹಿಸಲು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತುಮಕೂರು ನಗರ, ಶಿರಾ, ಗುಬ್ಬಿ ತಾಲೂಕುಗಳಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಜಿಲ್ಲೆಯು ಬೆಂಗಳೂರಿಗೆ ಸಮೀಪವಿರುವುದರಿಂದ ಪ್ರತಿನಿತ್ಯ ಸುಮಾರು ೪೫-೫೦ ಸಾವಿರ ಜನರು ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದು, ಇವರು ಮದುವೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೆ ತೆರಳುತ್ತಿರುವ ಕಾರಣ ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಕೋವಿಡ್ ಪರೀಕ್ಷೆ ಮತ್ತು ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಪ್ರಮಾಣವನ್ನು ಹೆಚ್ಚುಗೊಳಿಸಲಾಗುತ್ತಿದೆ. ಇದಕ್ಕಾಗಿ ತಾಲೂಕುವಾರು ಗುರಿ ನಿಗಧಿ ಮಾಡಲಾಗಿದ್ದು, ಪ್ರತಿದಿನ ಕನಿಷ್ಠ ೫೦೦ ಪರೀಕ್ಷೆ ಮಾಡಬೇಕು. ಸೋಂಕಿತರ ೨೦ ರಿಂದ ೩೦ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ, ೭೨ ಗಂಟೆಯೊಳಗೆ ಪರೀಕ್ಷೆಗೊಳಪಡಿಸಬೇಕು ಎಂದು ತಾಲೂಕು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ರೋಗ ಲಕ್ಷಣವಿಲ್ಲದವರನ್ನು ಹೋಂ ಐಸೋಲೇಷನ್‌ನಲ್ಲಿಡಬೇಕು ಹಾಗೂ ರೋಗ ಲಕ್ಷಣವಿರುವವರನ್ನು ಆಸ್ಪತ್ರೆಗೆ ದಾಖಲಿಸಬೇಕು. ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿರ್ದೇಶನದಂತೆ ಶೇಕಡ ೨೦ರಷ್ಟು ಹಾಸಿಗೆಗಳನ್ನು ಮೀಸಲಿರಿಸಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಶಸ್ತç ಚಿಕಿತ್ಸಕರು ಸೋಂಕಿತರ ದಾಖಲೆಗೆ ನಿರ್ದೇಶನ ಮಾಡಿದರೆ ಅಂತಹವರನ್ನು ದಾಖಲಿಸಿಕೊಳ್ಳಬೇಕು ಎಂದು ಈಗಾಗಲೇ ಸೂಚಿಸಲಾಗಿದೆ ಎಂದರು.

ತಾಲ್ಲೂಕುವಾರು ೫೦ ಹಾಸಿಗೆಗಳಂತೆ ಜಿಲ್ಲೆಯಲ್ಲಿ ಒಟ್ಟು ೪೫೦ ಹಾಸಿಗೆಗಳನ್ನು ಮತ್ತು ಜಿಲ್ಲಾಸ್ಪತ್ರೆಯಲ್ಲಿ ೨೨೫ ಹಾಗೂ ವಿವಿಧ ಆಸ್ಪತ್ರೆಗಳಲ್ಲಿ ೨೬೦ ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದು ಅವರು ಹೇಳಿದ್ದಾರೆ.

ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡುವಂತಿಲ್ಲ :-

ಕೋವಿಡ್ ನಿಯಂತ್ರಿಸಲು ಜಿಲ್ಲಾ ವ್ಯಾಪ್ತಿಯಲ್ಲಿನ ಔಷಧಿ ಅಂಗಡಿಗಳಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೆ ಜ್ವರ, ಶೀತ, ಕೆಮ್ಮು, ಎಸ್‌ಎಆರ್‌ಐ ಹಾಗೂ ಐಎಲ್‌ಐ ಮತ್ತು ಇತರೆ ಕೋವಿಡ್-೧೯ ಸೋಂಕಿನ ರೋಗಲಕ್ಷಣ ಇರುವಂತಹ ವ್ಯಕ್ತಿಗಳಿಗೆ ಸಂಬAಧಪಟ್ಟAತಹ ಯಾವುದೇ ಔಷಧಿಗಳನ್ನು ವಿತರಣೆ/ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ವೈದ್ಯರ ಸಲಹಾ ಚೀಟಿಯಂತೆ ಸದರಿ ಔಷಧಿಗಳನ್ನು ಪಡೆದವರ ಮಾಹಿತಿಯನ್ನು ಸರ್ಕಾರದ ತಂತ್ರಾAಶದಲ್ಲಿ ಔಷಧಾಲಯಕ್ಕೆ ಸಂಬAಧಪಟ್ಟವರು ಪ್ರತಿನಿತ್ಯ ಕಡ್ಡಾಯವಾಗಿ ನಮೂದಿಸಬೇಕು. ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆರೋಗ್ಯ ಆ್ಯಪ್ ಬಳಕೆ/ಲಸಿಕೆ ಪಡೆಯಲು ಅರಿವು :-

ಕೋವಿಡ್-೧೯ ನಿಯಂತ್ರಣ ಸಂಬOಧ ಸಾರ್ವಜನಿಕರು ಆರೋಗ್ಯ ಸೇತು ಆ್ಯಪ್ ಹೆಚ್ಚಾಗಿ ಬಳಕೆ ಮಾಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಶಿಕ್ಷಕರು/ಶಿಕ್ಷಣ ಇಲಾಖೆ ಅಧಿಕಾರಿಗಳು/ನೌಕರರು ಸ್ವಯಂ ಪ್ರೇರಿತರಾಗಿ ಪ್ರತಿನಿತ್ಯ ೧೦ ಕುಟುಂಬಗಳಿಗೆ ಆರೋಗ್ಯ ಸೇತು ಆ್ಯಪ್ ಬಳಕೆ ಹಾಗೂ ಲಸಿಕೆ ಪಡೆಯುವಂತೆ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದ್ದಾರೆ.

ವಾರ್ ರೂಮ್ ಆರಂಭ:-

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಹಾಗೂ ಕಾಲಕಾಲಕ್ಕೆ ಸರ್ಕಾರಕ್ಕೆ ಮಾಹಿತಿ ಸಲ್ಲಿಸಲು ಹಾಗೂ ಆನ್‌ಲೈನ್ ತಂತ್ರಾAಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡಲು ಕೋವಿಡ್ ವಾರ್ ರೂಮ್ ಅನ್ನು ಜಿಲ್ಲಾಧಿಕಾರಿಗಳು ಸ್ಥಾಪಿಸಿದ್ದಾರೆ. ಈ ವಾರ್ ರೂಂಗೆ ನೋಡಲ್ ಅಧಿಕಾರಿಯನ್ನಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version