ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ -ಹೈಕೋರ್ಟ್
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದೆ.
ಹಿಜಾಬ್ ಧರಿಸುವ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ನ ಸದಸ್ಯ ಪೀಠದ ನ್ಯಾಯಮೂರ್ತಿಗಳು ಮಂಗಳವಾರ ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಇದಕ್ಕೂ ಮೊದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 11ರಂದು ಮಧ್ಯಂತರ ಆದೇಶ ನೀಡಿದ ನಂತರ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಫೆಬ್ರವರಿ 25ರಂದು ತೀರ್ಪು ಸಂಬಂಧ ದಿನಾಂಕ ನಿಗದಿ ಮಾಡಿದ್ದರು ಅದರಂತೆ ಇಂದು ತೀರ್ಪು ಪ್ರಕಟವಾಗಿದೆ.
ತೀರ್ಪಿನ ಸಾರಾಂಶ_ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಇಲ್ಲ ಎನ್ನುವ ಐತಿಹಾಸಿಕ ತೀರ್ಪನ್ನು ಮಂಗಳವಾರ ಹೈಕೋರ್ಟ್ ನೀಡಿದೆ. ಹಿಜಾಬ್ ಸಂಬಂಧ ಸಲ್ಲಿಕೆಯಾಗಿದ್ದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ದರಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ತೀರ್ಪಿನಲ್ಲಿ ತಿಳಿಸಿದೆ.
ಸಮವಸ್ತ್ರ ಕಡ್ಡಾಯ ಆದೇಶ ಎತ್ತಿ ಹಿಡಿದ ಹೈಕೋರ್ಟ್ ತರಗತಿಯಲ್ಲಿ ಹಿಜಾಬ್ ಧರಿಸಲು ಯಾವುದೇ ಅವಕಾಶವಿಲ್ಲ ಸಮವಸ್ತ್ರ ಕಡ್ಡಾಯಗೊಳಿಸಿದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿಗದಿಮಾಡುವ ಅಧಿಕಾರ ಇದೆ ಎಂದು ತೀರ್ಪಿನಲ್ಲಿ ತಿಳಿಸಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಹಿಜಾಬ್ ಸಂಬಂಧ ಕೋರಿದ ಎಲ್ಲಾ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣಕ್ಕೆ ಪೂರ್ಣ ಪೀಠದಿಂದ ಮಹತ್ವದ ತೀರ್ಪನ್ನು ನೀಡಿದ್ದು.
ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಸಿಜೆ ರಿತುರಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ,ನ್ಯಾಯಮೂರ್ತಿ ಖಾಜಿ ಜೈಬುನ್ನಿಸ ರವರ ತ್ರಿಸದಸ್ಯ ಪೀಠದಿಂದ ತೀರ್ಪು ಪ್ರಕಟವಾಗಿದೆ.