ಗಣರಾಜ್ಯೋತ್ಸವ ದಿನದಂದೇ ಅಂಬೇಡ್ಕರ್ ಹಾಗೂ ಗಾಂಧಿ ಫೋಟೋಗೆ ಅವಮಾನ ಮಾಡಿದ ಅಧಿಕಾರಿಗಳು. ಸಾರ್ವಜನಿಕರ ಆಕ್ರೋಶ
ತುಮಕೂರು -ದೇಶಾದ್ಯಂತ ಇಂದು 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ.
ಆದರೆ ತುಮಕೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಕಚೇರಿಯ ಮೇಲ್ಭಾಗದಲ್ಲಿ ರಾಷ್ಟ್ರಧ್ವಜವನ್ನ ಹಾರಿಸಿ ರಾಷ್ಟ್ರಧ್ವಜದ ಕೆಳಗೆ ಅಂಬೇಡ್ಕರ್ ಹಾಗೂ ಗಾಂಧೀಜಿಯವರ ಫೋಟೋಗಳನ್ನ ಬೆಳಗ್ಗೆಯಿಂದ ಸಂಜೆಯವರೆಗೂ ಬಿಸಿಲಿನಲ್ಲಿ ಇಟ್ಟು ಕಚೇರಿಯ ಬೀಗವನ್ನು ಹಾಕಿಕೊಂಡು ತೆರಳಿ ನಿರ್ಲಕ್ಷ ತೋರಿದ್ದಾರೆ.
ಇನ್ನು ಅಧಿಕಾರಿಗಳ ನಡೆಗೆ ದಲಿತ ಸಂಘಟನೆಗಳ ಮುಖಂಡರು ಹಾಗೂ ಪ್ರಜ್ಞಾವಂತ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದು ಸರ್ಕಾರದ ಮಾರ್ಗಸೂಚಿ ಅನ್ವಯ ಅಧಿಕಾರಿಗಳು ಗಣರಾಜ್ಯೋತ್ಸವವನ್ನು ಆಚರಿಸುವುದನ್ನು ಬಿಟ್ಟು ಕೇವಲ ಕಾಟಾಚಾರಕ್ಕಾಗಿ ಗಣರಾಜ್ಯೋತ್ಸವವನ್ನು ಆಚರಿಸಿದ್ದಾರೆ ಈ ಮೂಲಕ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್ ಕೆ ನಿಧಿ ಕುಮಾರ್ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಫೋಟೋಗಳನ್ನ ಬಿಸಿಲಿನಲ್ಲಿ ಇಟ್ಟು ಅವಮಾನ ಮಾಡಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.