ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ್ ಅದಾಲತ್ ಸದುಪಯೋಗಕ್ಕೆ ನ್ಯಾ.ಗೀತಾ ಕೆ.ಬಿ ಕರೆ

ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ್ ಅದಾಲತ್ ಸದುಪಯೋಗಕ್ಕೆ ನ್ಯಾ.ಗೀತಾ ಕೆ.ಬಿ ಕರೆ

ತುಮಕೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ನ್ಯಾಯಾಲಯಗಳಲ್ಲಿ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು.

 

 

 

ಇಂದು ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.ಉಚ್ಚ ನ್ಯಾಯಾಲದ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಜಸ್ಟೀಸ್.ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಾಕಿ ಇರುವ ಟ್ರಾಫಿಕ್ ದಂಡ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿ ಶಿಪಾರಸ್ಸು ಮಾಡಿದ್ದರು, ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಅನುಮತಿ ನೀಡಿದ್ದರು, ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ 44 ಬಗೆಯ ಎಲ್ಲಾ ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ರಿಯಾಯಿತಿ ಪ್ರಕರಣಗಳಲ್ಲಿ ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ. 50% ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

 

 

ಪೊಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿದ್ದು, ಸಂಚಾರಿ ದಂಡ ಪಾವತಿಗೆ 50 ಶೇಕಡಾ ರಿಯಾಯಿತಿ ನೀಡಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು,ಸಾರ್ವಜನಿಕರು ಸ್ವಯಂಪ್ರೇರಿತವಾಗಿ ದಂಡ ಪಾವತಿಸುತ್ತಿದ್ದು, ಪೊಲೀಸ್ ಠಾಣೆಯಲ್ಲಿ ದಂಡ ಪಾವತಿಗೆ ಅವಕಾಶ ನೀಡಲಾಗಿದ್ದು, ದಂಡ ವಿಧಿಸಿರುವುದರಲ್ಲಿ ಸಮಸ್ಯೆಗಳಿದ್ದರೆ ಸಂಚಾರ ನಿಯಂತ್ರಣ ಠಾಣೆಗಳಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದಾಗಿದೆ.

 

 

 

“ಸರ್ವರಿಗೂ ನ್ಯಾಯ” ಎಂಬುದು ಭಾರತದ ಕಾನೂನು ಸೇವೆಗಳ ಧ್ಯೇಯವಾಗಿದೆ, ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ, ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಇರುವಂತಹ ಕಾನೂನಿನ ಸಂಕಿರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಿ ನ್ಯಾಯಾಲಯಗಳಲ್ಲಿ ಚಾಲ್ತಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೆವಾರಿ ಮಾಡಲು ಸಾಧ್ಯವಾಗುತ್ತದೆ, ಲೋಕ್ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ, ಸ್ವಪ್ರೇರಣೆಯಿಂದ ಮುಂದೆ ಬಂದು ತಮ್ಮ ವಿವಾದಗಳನ್ನು ಬಗೆಹರಿಸಿಕೊಂಡಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಬಹುದಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಭೇಟಿ ನೀಡಿ, ತಮ್ಮ ಸಿವಿಲ್ ಪ್ರಕರಣ ಇತ್ಯರ್ಥಪಡಿಸಕೊಳ್ಳಬಹುದು, ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸಲಾಗುವುದು ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊAದು ವಿಶೇಷ ಅವಕಾಶವಾಗಿದೆ ಎಂದರು

 

 

 

ಮಾಹಿತಿಗಾಗಿ ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್ ವಿಳಾಸ:dlsatumkur1@gmail.comನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ:08162255133 ಮತ್ತು 9141193959 ಅನ್ನು ಸಂಪರ್ಕಿಸಬಹುದು, ಖುದ್ದು ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹದಾಗಿದ್ದು.

 

 

ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ:1800-425-90900ಗೆ ಸಂಪರ್ಕಿಸಬಹುದು, ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾನೂರುನ್ನೀಸ ತಿಳಿಸಿದರು.

 

 

 

ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ಸಮಸ್ಯೆಗಳಿದ್ದರೆ, ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0816-2213400 ಸಂಪರ್ಕಿಸಿಬಹುದಾಗಿದೆ ಎಂದು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಕಾರ್ಯನಿರ್ವಹಾಧಿಕಾರಿ ಬಿ.ಟಿ ರಂಗಸ್ವಾಮಿ ತಿಳಿಸಿದರು.

 

 

ಫೆಬ್ರವರಿ 2021 ರಿಂದ ಜನವರಿ 2023ರ ವರಗೆ ರೂ 1,71,39,500/- ಮೊತ್ತದ ಒಟ್ಟು 32404 ಇ ಚಲನ್ ಪ್ರಕರಣಗಳು ದಾಖಲಾಗಿದ್ದು, 22,76,000/- ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ, ಎಂದು ಜಿಲ್ಲಾ ಅಪರಾಧ ದಾಖಲೆ ವಿಭಾಗದ ಡಿ.ವ್ಯೆ.ಎಸ್.ಪಿ ಧಮೇಂದ್ರ ತಿಳಿಸಿದರು.

 

 

 

ಈ ಸಂದರ್ಭದಲ್ಲಿ ನಗರ ಸಂಚಾರ ಅರಕ್ಷಕ ನರೀಕ್ಷಕರಾದ ಶುಭಾಂಬಿಕ, ಕಾನೂನು ಪಾಲನೆ ಅರಕ್ಷಕ ನೀರಿಕ್ಷಕರಾದ ದಿನೇಶಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನರಸಿಂಹಮೂರ್ತಿ, ಲತಾ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!