ಆಕ್ಸಿಜನ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ

 

ಆಕ್ಸಿಜನ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು .

 

ಆಕ್ಸಿಜನ್ ಸಮಸ್ಯೆ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು . ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ . 5,500 ಮೆಟ್ರಿಕ್ ಟನ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ . ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಲ್ಲಾ ವ್ಯವಸ್ಥೆ ಮಾಡಲಾಗಿದೆ . ಜಂಬು ಸಿಲಿಂಡರ್ ಗಳಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ . ಆಕ್ಸಿಜನ್ ಪೂರೈಕೆ ಸಂಬಂಧ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಜತೆಯೂ ಚರ್ಚಿಸಿದ್ದೇವೆ , ಈಗಾಗಲೇ ಆಕ್ಸಿಜನ್ ಉತ್ಪಾದಕರ ಜೊತೆ ಮಾತುಕತೆ ನಡೆದಿದೆ . 40,000 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜಾಗಿದೆ ಎಂದು ತಿಳಿಸಿದರು .

 

ರೆಮ್ ಡಿಸಿವಿಲ್ ಬಗ್ಗೆ ತಪ್ಪು ಕಲ್ಪನೆಯಿದೆ . ಅದನ್ನು ಪಡೆದರೆ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತೇವೆ ಎಂದುಕೊಂಡಿದ್ದಾರೆ . ಆದರೆ ರೆಮ್ ಡಿಸಿವಿರ್ ಗಿಂತ ಸ್ಟೆರಾಯ್ ಪರಿಣಾಮಕಾರಿ . ಉತ್ತಮವಾಗಿ ಕೆಲಸ ಮಾಡುತ್ತದೆ,

 

ರಾಜ್ಯದಲ್ಲಿ ಎಲ್ಲಾ ಅರ್ಹರಿಗೂ ಕೋವಿಡ್ ಲಸಿಕೆ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಸ್ಪಷ್ಟಪಡಿಸಿದರು .

ಕೊರೊನಾ ಸಂಜೀವಿನಿ ಎಂದು ಬಿಂಬಿತವಾಗಿರುವ ರೆಮಿಡಿಸಿವಿಲ್ ಲೈಫ್ ಸೇವಿಂಗ್ ಡ್ರಗ್ ಅಲ್ಲ . ವೈಜ್ಞಾನಿಕವಾಗಿ ಅದು ಲೈಫ್ ಸೇವಿಂಗ್ ಡ್ರಗ್ ಅಲ್ಲ . ಜನ ಸಾಮಾನ್ಯರಲ್ಲಿ ಈ ರೀತಿಯ ಅಭಿಪ್ರಾಯ ಮೂಡಿದೆ ಅಷ್ಟೇ ವಿಶ್ವ ಆರೋಗ್ಯ ಸಂಸ್ಥೆಯ ಪಟ್ಟಿಯಲ್ಲೂ ರೆಮಿಡಿಸಿವಿಲ್ ಇಲ್ಲ . ನಾನು ವೈದ್ಯನಾಗಿ ಹೇಳಬೇಕೆಂದರೆ ಅದರ ಬದಲು ಸಿರಾಯಿಡ್ ಪರಿಣಾಮಕಾರಿಯಾಗಿದೆ . ಅದಕ್ಕಿಂತ ಕಡಿಮೆ ದರದ ಪರ್ಯಾಯ ಔಷಧಿಗಳಿವೆ . ಕೊರೋನಾ ಕಡಿಮೆಯಾದ ಹಿನ್ನೆಲೆಯಲ್ಲಿ ರೆಮಿಡಿಸಿಮಿರ್ ಉತ್ಪಾದನೆ ನಿಲ್ಲಿಸಲಾಗಿತ್ತು . ಈಗ ಮತ್ತೆ ಕೊರೋನಾ ಜಾಸ್ತಿಯಾಗಿದೆ . ಬೇಡಿಕೆ ಹೆಚ್ಚಾಗಿದೆ . ಸ್ವಲ್ಪ ದಿನದಲ್ಲಿ ಪೂರೈಕೆ ಸರಿಯಾಗುತ್ತದೆ . ದೇಶದಲ್ಲಿ 8 ರಿಂದ 9 ಕಂಪನಿಗಳು ಮಾತ್ರ ರೆಮಿಡಿಸಿವಿ‌ ಉತ್ಪಾದನೆ ಮಾಡುತ್ತಿವೆ

 

ಇಂದು ಮಧ್ಯಾಹ್ನ ಸಿಎಂ ಬಿ ಎಸ್ ಯಡಿಯೂರಪ್ಪ ಆಸ್ಪತ್ರೆಯಿಂದ ಮರಳಲಿದ್ದಾರೆ . ಆಸ್ಪತ್ರೆಯಿಂದ ಬಂದ ತಕ್ಷಣ ಲಸಿಕೆ ಕುರಿತ ಸಭೆ ನಡೆಯಲಿದೆ . ಸಭೆಯಲ್ಲಿ ಲಸಿಕೆ ಉಚಿತವಾಗಿ ನೀಡುವ ಬಗ್ಗೆ ಚರ್ಚೆ ನಡೆದು ತೀರ್ಮಾನವಾಗಲಿದೆ . ಎರಡು ಗಂಟೆ ಕಾಯಿರಿ ಲಸಿಕೆ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ . ಕೇಂದ್ರ ಸರ್ಕಾರ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿಲ್ಲ . ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡುತ್ತಿವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!