ಪರಿಷತ್ ಚುನಾವಣೆ ಟಿಕೇಟ್ ಹಂಚಿಕೆ ಪಕ್ಷದ ಹಿರಿಯರಿಗೆ ಹಾಗೂ ಹೈಕಮಾಂಡಿಗೆ ಸೇರಿದ್ದು _ಗೃಹ ಸಚಿವ ಆರಗ ಜ್ಞಾನೇಂದ್ರ
ತುಮಕೂರು_ ಆಜಾನ್ ಧ್ವನಿವರ್ಧಕಗಳ ಸಂಬಂಧ ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದ್ದು ಅದರ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೆಂದ್ರ ತಿಳಿಸಿದ್ದಾರೆ.
ತುಮಕೂರಿನ ಹರಳೂರು ಗ್ರಾಮದಲ್ಲಿನ ದೇವಸ್ಥಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇಂದು ಸರ್ಕಾರ ನೀಡಿದ ಗಡುವು ಮುಕ್ತಾಯಗೊಂಡಿದ್ದು ಮತ್ತಷ್ಟು ಕಾಲಾವಕಾಶವನ್ನು ಕೆಲವರು ಕೇಳಿದ್ದು ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಕೆಡಿಪಿ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಈಗಾಗಲೇ ಒಂದು ಕೆಡಿಪಿ ಸಭೆಯನ್ನು ಮಾಡಿದ್ದು ತುಮಕೂರು ಜಿಲ್ಲೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದ ಅವರು ಬೆಂಗಳೂರಿನಲ್ಲಿ ತುಮಕೂರು ನಗರೋತ್ಥಾನ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಮಸೀದಿಗಳಲ್ಲಿ ನ ಆಜಾನ್ ಸಂಬಂಧ ಮತ್ತಷ್ಟು ಕಾಲಾವಕಾಶ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು ಆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.
ಮಳೆಹಾನಿ ಸಂಬಂಧ ಪ್ರತಿಕ್ರಿಯಿಸಿರುವ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರ ನೀಡುವ ಬಗ್ಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ವಿಧಾನಪರಿಷತ್ ಚುನಾವಣೆ ಸಂಬಂಧ ಬಿ.ವೈ ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದ ಬಗ್ಗೆ ಮಾಹಿತಿ ನೀಡಿರುವ ಅವರು ಈ ಬಗ್ಗೆ ಯಾವುದೇ ಸಮುದಾಯಕ್ಕೂ ಅಸಮಾಧಾನ ಇಲ್ಲ ಟಿಕೆಟ್ ಬಗ್ಗೆ ಪಕ್ಷದ ಹಿರಿಯರು ಹಾಗೂ ಪಕ್ಷ ನಿರ್ಧಾರ ತೆಗೆದುಕೊಂಡಿದೆ ನಮ್ಮ ಪಕ್ಷದಲ್ಲಿ ಎಲ್ಲ ಸಮುದಾಯಕ್ಕೂ ಆದ್ಯತೆ ಸಿಕ್ಕಿದೆ ಈ ಬಗ್ಗೆ ಪಕ್ಷ ನಿರ್ಧಾರ ಕೈಗೊಂಡಿದೆ ಟಿಕೆಟ್ ಬಗೆಗಿನ ನಿರ್ಧಾರ ಪಕ್ಷದ ಹಿರಿಯರು ಹಾಗೂ ಹೈಕಮಾಂಡಿಗೆ ಬಿಟ್ಟದ್ದು ಎಂದಿದ್ದಾರೆ.