ತುಮಕೂರು ಜಿಲ್ಲೆಯ ಜನರು ಶಾಂತಿ ಪ್ರಿಯರು _ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್.
ತುಮಕೂರು_ತುಮಕೂರು ಜಿಲ್ಲೆಯ ಜನತೆ ಶಾಂತಿಪ್ರಿಯರು ಅವರು ಜಿಲ್ಲೆಯ ಎಲ್ಲಾ ಸಮುದಾಯ, ಎಲ್ಲಾ ವರ್ಗಗಳು, ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲರೂ ಸಹ ಶಾಂತಿಪ್ರಿಯರು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ತಿಳಿಸಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಅವರು ಹಿಜಬ್ ಹಾಗೂ ಕೇಸರಿ ಶಾಲು ಸಂಬಂಧ ತುಮಕೂರು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಇನ್ನು ಜಿಲ್ಲಾಡಳಿತ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರದಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ತುಮಕೂರು ಜನ ಸಹ ಶಾಂತಿಪ್ರಿಯರು ಎಲ್ಲರೂ ಸಹ ಎಲ್ಲಾ ಸಮಯದಲ್ಲೂ ಸಹಕಾರ ಕೊಟ್ಟಿದ್ದಾರೆ ಇನ್ನೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಯಾರು ಸಹ ಶಾಲಾ-ಕಾಲೇಜುಗಳಿಗೆ ಧಾರ್ಮಿಕ ಭಾವನೆಯ ಸಂಕೇತವಾಗಿರುವ ಯಾವುದೇ ವಸ್ತ್ರಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ತೆರಳದಂತೆ ಸೂಚನೆ ನೀಡಿದ್ದು ಈ ಬಗ್ಗೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ಸರ್ಕಾರದ ಆದೇಶದ ಅನ್ವಯ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು ಜಿಲ್ಲಾಧಿಕಾರಿಗಳು ,ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಆದೇಶದ ಅನ್ವಯ ಕ್ರಮಕೈಗೊಳ್ಳಲಾಗಿದೆ ಇನ್ನು ತುಮಕೂರು ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಿಗೆ ಈಗಾಗಲೇ ಭೇಟಿ ನೀಡಿ ಎಚ್ಚರ ವಹಿಸಲಾಗಿದೆ.
ಎಲ್ಲಾ ಧಾರ್ಮಿಕ ಮುಖಂಡರು, ರಾಜಕಾರಣಿಗಳು ಸಂಘ-ಸಂಸ್ಥೆಗಳು ಸಂಪರ್ಕದಲ್ಲಿದ್ದಾರೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ತಿಳಿಸಲಾಗಿದೆ ಎಂದಿದ್ದಾರೆ.
ವರದಿ_ ಮಾರುತಿ ಪ್ರಸಾದ್ ತುಮಕೂರು