ಸಿನಿಮಾ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟ

ಬೇಲೂರು : ಸಿನಿಮಾ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟಗೊಂಡ ಪರಿಣಾಮ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೆಲೂರಿನಲ್ಲಿ ನಡೆದಿದೆ.

ಹೀರೋ ಚಿತ್ರದ ಶೂಟಿಂಗ್ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಏಕಾಏಕಿ ಬೆಂಕಿ ಬಿದ್ದಿದೆ. ಈ ವೇಳೆ ನಟ ರಿಷಬ್ ಶೆಟ್ಟಿ ಬೆನ್ನಿಗೆ ಗಾಯವಾಗಿದ್ದು, ತಲೆ ಕೂದಲಿಗೂ ಬೆಂಕಿ ತಗುಲಿದೆ. ಘಟನೆಯಲ್ಲಿ ರಿಷಬ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ

ಹೀರೋ ಚಿತ್ರ ಇದೇ ಮಾರ್ಚ್‌ 5 ರಂದು ಬಿಡುಗಡೆಯಾಗಲಿದೆ ಎಂದೇ ಹೇಳಲಾಗಿತ್ತು. ಅತಿ ಕಡಿಮೆ ಅವಧಿಯಲ್ಲಿ ಶೂಟಿಂಗ್‌ ಮುಗಿಸಿ ತೆರೆಗೆ ತರಲು ಚಿತ್ರತಂಡ ಸಿದ್ಧತೆ ನಡೆಸಿದ್ದು, ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!