ಯೋಧರೊಂದಿಗೆ ಇಂದು ಪ್ರಧಾನಿ ಮೋದಿ ದೀಪಾವಳಿ ಆಚರಣೆ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೈನಿಕರೊಂದಿಗೆ ಹಬ್ಬ ಆಚರಣೆ ಮಾಡಿದ್ದಾರೆ. ಇದೇ ವೇಳೆ ಜೊತೆಗೆ ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಬೆಳಕಿನ ಹಬ್ಬ ಎಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಹೊತ್ತು ತರಲಿ ಎಂದು ಆಶಿಸಿದ್ದಾರೆ.
ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.
ಮೋದಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಗಡಿಯಲ್ಲಿ 5ನೇ ಬಾರಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಇದಕ್ಕೂ ಮುನ್ನ ಅವರು 2014ರಲ್ಲಿ ಸಿಯಾಚಿನ್ ಗೆ ತೆರಳಿದ್ದರು. ಇಲ್ಲಿ ದೀಪಾವಳಿ ಆಚರಿಸಿ ಶ್ರೀನಗರಕ್ಕೂ ಹೋಗಿದ್ದರು. 2017 ರಲ್ಲಿ ಅವರು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಬಿಎಸ್‌ಎಫ್ ಸಿಬ್ಬಂದಿಯೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು. 2019 ರಲ್ಲಿ,ರಜೌರಿಯ ದಾತಿ ದಳಕ್ಕೆ ತೆರಳಿ ಸೈನಿಕರೊಂದಿಗೆ ದೀಪಾವಳಿಯನ್ನು ಸಂಭ್ರಮಿಸಿದ್ದರು. ಅದೇ ರೀತಿ, 2020 ರಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಲಾಂಗಾವಾಲಾ ಗಡಿಯಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.