ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ 8 ಮಂದಿಯ ಬಂಧನ

 

ಜೂಜು ಅಡ್ಡೆ ಮೇಲೆ ದಾಳಿ, 8 ಮಂದಿ ಬಂಧನ.ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನೀಲಗಿರಿ ತೋಪಿನಲ್ಲಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ನೇತೃತ್ವದ ತಂಡ 8 ಮಂದಿ ಜೂಜುಕೋರರನ್ನು ಬಂಧಿನ ಮಾಡಿದ್ದಾರೆ.

 

ದೊಡ್ಡಬೆಳವಂಗಲ ಪೋಲಿಸ್ ಠಾಣಾ ವ್ಯಾಪ್ತಿಯ ಐನಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ಡಿವೈಎಸ್ಪಿ ಟಿ.ರಂಗಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ಹಾಗೂ ತಂಡದವರು ದಾಳಿ ಮಾಡಿ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ದಾಳಿ ವೇಳೆ ರೂ 95,500 ನಗದು, ಒಂದು ಕಾರು, ನಾಲ್ಕು ಬೈಕ್ ಹಾಗೂ ಎಂಟು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ದೊಡ್ಡಬಳ್ಳಾಪುರ ತಾಲ್ಲೂಕಿನ ಐನಳ್ಳಿ ಗ್ರಾಮದಲ್ಲಿ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ೮ ಮಂದಿಯನ್ನು ಬಂಧಿಸಿದ್ದಾರೆ.

 

ಗುರುಮೂರ್ತಿ ಬೂದಿಗೆರೆ

8861100990

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version