ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಾಗುವ ಮುನ್ಸೂಚನೆ..!!!
ಕಾರವಾರ : ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಬಸವಳಿದಿರುವ ಜನತೆಗೆ ಈಗ ಬೆಸ್ಕಾಂ ಕೂಡ ಶಾಕ್ ನೀಡಲು ಮುಂದಾಗಿದೆ. ಒಂದು ಕಡೆ ಬೆಲೆ ಏರಿಕೆ, ಇನ್ನೊಂದು ಕಡೆ ಕೋವಿಡ್ ಆತಂಕ ಈಗ ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಾಗುವ ಮುನ್ಸೂಚನೆ ಸಿಕ್ಕಿದೆ.
ಪ್ರತಿ ಯುನಿಟ್‌ಗೆ 1.50 ರೂಪಾಯಿ ಹೆಚ್ಚಳಕ್ಕೆ ಬೆಸ್ಕಾಂ ಅಧಿಕಾರಿಗಳು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ನಷ್ಟದ ನೆಪವೊಡ್ಡಿ ಬೆಸ್ಕಾಂ ವ್ಯಾಪ್ತಿಯಲ್ಲಿ 1 ರೂ 50 ಪೈಸೆ ಹೆಚ್ಚಳ ಮಾಡುವಂತೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.
ಕಳೆದ ಬಾರಿ 1 ರೂ 39 ಪೈಸೆ ಪ್ರಸ್ತಾವನೆ ಇಟ್ಟಿತ್ತು. ಇದೀಗ ಮತ್ತೆ ಈ ಬಾರಿ 1 ರೂ 50 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಸಲ್ಲಿಸಿದೆ. ಸದ್ಯ ಈಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಾ? ಎಂಬ ಪ್ರಶ್ನೆ ಎದ್ದಿದೆ. KERC ಸಾಧಕ ಬಾಧಕಗಳನ್ನ ಪರಿಶೀಲನೆ ಮಾಡಿ ದರ ಪರಿಷ್ಕರಣೆ ಮಾಡಲಿದೆ. ಬೆಸ್ಕಾಂ ಪ್ರಸ್ತಾವನೆಗೆ KERC ಒಪ್ಪಿಗೆ ಕೊಟ್ಟರೆ ಜನರಿಗೆ ದರ ಹೆಚ್ಚಳದ ಬಿಸಿ ತಟ್ಟಲಿದೆ.