ಪ್ರವೀಣ್ ನೆಟ್ಟಾರು ಹತ್ಯೆ, ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ ಋಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮಿ

ಪ್ರವೀಣ್ ನೆಟ್ಟಾರು ಹತ್ಯೆ, ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ ಋಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮಿ).

 

ತುಮಕೂರು_ದಕ್ಷಿಣ ಕನ್ನಡದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಹಂತಕರಿಗೆ ಎನ್ಕೌಂಟರ್ ಮಾಡುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಕಡೂರಿನ ಕಾಳಿ ಮಠದ ಕೃಷಿಕುಮಾರ ಸ್ವಾಮಿಗಳು ಸರ್ಕಾರವನ್ನ ಒತ್ತಾಯಿಸಿದ್ದಾರೆ.

 

 

ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ದಕ್ಷಿಣ ಕನ್ನಡದಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟರು ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದ ಅವರು ಮಾನವ ಸರಪಳಿ ನಿರ್ಮಿಸಿ ,ಮೌನಚರಣೆ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

 

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ರಾಜ್ಯದಲ್ಲಿ ಇದುವರೆಗೂ 35ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಸಹ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಹಾಗಾಗಿ ಸರ್ಕಾರ ಶೀಘ್ರವಾಗಿ ಹಂತಕರನ್ನ ಬಂಧಿಸಿ ಎನ್ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಮೂರು ದಿನಗಳ ನೀಡಿರುವ ಅವರು ಮೂರು ದಿನಗಳೊಳಗೆ ಆರೋಪಿಗಳಿಗೆ ಕಠಿಣ ಕ್ರಮ ಆಗದಿದ್ದಲ್ಲಿ ತುಮಕೂರಿನ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಬೆಂಗಳೂರು ಚಲೋ ನಡೆಸಲಾಗುವುದು ಎಂದಿದ್ದಾರೆ.

 

ರಾಜ್ಯದಲ್ಲಿ ಹಲವಾರು ಹಿಂದೂ ಕಾರ್ಯಕರ್ತರ ಕಗ್ಗೊಲೆಗಳನ್ನ ನೋಡಿ ಸಾಕಾಗಿದೆ ರಾಜ್ಯದಲ್ಲಿ ಹತ್ಯೆಯಾಗಿರುವ ಎಲ್ಲಾ ಹಿಂದೂ ಕಾರ್ಯಕರ್ತರು ಅಮಾಯಕರಾಗಿದ್ದಾರೆ ಬಲಾಡ್ಯರ ಮೇಲೆ ಅವರ ಆಕ್ರೋಶವನ್ನು ಹೊರಹಾಕಲು ಕೈಲಾಗದ ಹೇಡಿಗಳು ಇಂತಹ ಹೇಗೆ ಕೃತ್ಯಗಳಿಗೆ ಇಳಿದಿದ್ದಾರೆ ಇನ್ನು ಹತ್ಯೆ ಕೋರರಿಗೆ ಎಚ್ಚರಿಕೆ ನೀಡಿರುವ ಅವರು ತಮಗೆ ಧೈರ್ಯವಿದ್ದರೆ ನನ್ನನ್ನು ಹತ್ಯೆ ಮಾಡಿ ಎಂದು ನೇರವಾಗಿ ಎಚ್ಚರಿಕೆಯನ್ನು ಸಹ ರವಾನಿಸಿದ್ದಾರೆ  ಹತ್ಯೆಕೋರರನ್ನು ಪ್ರಶ್ನೆ ಮಾಡಿರುವ ಅವರು ಹತ್ಯೆ ಕೋರರ ವಿರುದ್ಧ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.

 

ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣವಾಗಿರುವ ಸಂಘಟನೆಗಳಾದ ಪಾಪುಲರ್ ಫ್ರೆಂಡ್ ಆಫ್ ಇಂಡಿಯಾ  ಸಿ ಎಫ್ ಐ ಸಂಘಟನೆಗಳನ್ನ ರಾಜ್ಯದಲ್ಲಿ ನಿಷೇಧ ಮಾಡಬೇಕು ಇಲ್ಲವಾದರೆ ಇದೇ ತರಹದ ಹೀನ ಕೃತ್ಯಗಳು ರಾಜ್ಯದಲ್ಲಿ ನಡೆಯುತ್ತಲೇ ಇರುತ್ತವೆ ಹಾಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಲು ಹಿಂದೂ ಕಾರ್ಯಕರ್ತರು ಮುಂದಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ , ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರವನ್ನು ನೆಚ್ಚಿಕೊಂಡು ಪ್ರತಿಭಟನೆ ಮಾಡುತ್ತಿಲ್ಲ ನಮ್ಮ ರಕ್ಷಣೆಯನ್ನ ನಾವೇ ಮಾಡಿಕೊಳ್ಳಲಿದ್ದೇವೆ ಅಮಾಯಕ ಕಾರ್ಯಕರ್ತರ ಹತ್ಯೆಗಳನ್ನ ಸರ್ಕಾರ ತಡೆಗಟ್ಟಲು ಮುಂದಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

 

 

 

ಇನ್ನು ಪ್ರತಿಭಟನೆಯಲ್ಲಿ ಮಾತನಾಡಿರುವ ತುಮಕೂರಿನ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಬಾರ್ಗವ ಮಾತನಾಡಿದ್ದು ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಗಳನ್ನ ಸಹಿಸಲಾಗುವುದಿಲ್ಲ ಕೂಡಲೇ ಸರ್ಕಾರ ತ್ವರಿತಗತಿಯಲ್ಲಿ ವಿಚಾರಣೆ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹತ್ಯೆ ಕೋರರನ್ನು ಗಲ್ಲಿಗೇರಿಸಬೇಕು ಈ ಮೂಲಕ ಸರ್ಕಾರ ಹಿಂದೂ ಕಾರ್ಯಕರ್ತರ ರಕ್ಷಣೆಗೆ ಮುಂದಾಗಬೇಕು ಎಂದಿದ್ದಾರೆ.

 

 

ಘಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಮುಖಂಡರುಗಳು ,ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

 

 

ವರದಿ _ವಿಜಯ ಭಾರತ ನ್ಯೂಸ್ ಡೆಸ್ಕ್

Leave a Reply

Your email address will not be published. Required fields are marked *

You cannot copy content of this page

error: Content is protected !!