ಬಿ ಎಸ್ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲು_ ಸ್ವಾಮೀಜಿಗಳ ಆಗ್ರಹ.

ಬಿ ಎಸ್ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಸಲು_ ಸ್ವಾಮೀಜಿಗಳ ಒತ್ತಾಯ.

 

 

ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ ಎಲ್ಲರನ್ನು ಸಮಾನರಂತೆ ಕಂಡು ಎಲ್ಲ ವರ್ಗದ ಜನರ ಜೊತೆ ಉತ್ತಮ ಒಡನಾಟ ಹೊಂದುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜ್ಯ ಹಾಗೂ ರಾಷ್ಟ್ರಕ್ಕೆ ಮಾದರಿಯಾಗಿದ್ದಾರೆ ಎಂದು ಬೆಟ್ಟದ ಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

 

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೊಡ್ಡಗುಣಿ ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ, ತೇವಡೆಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಯಳವ ಮಠದ ಬಸವ ಬೃಂಗೇಶ್ವರ ಸ್ವಾಮೀಜಿ ಗಳು ಯಡಿಯೂರಪ್ಪ ಒಬ್ಬ ಪ್ರಶ್ನಾತೀತ ನಾಯಕರಾಗಿದ್ದಾರೆ ಅವರು ಕರೋಣ ಸಂಕಷ್ಟ ಕಾಲದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಆದರೆ ಇಂಥ ಒಬ್ಬ ಯಶಸ್ವಿ ನಾಯಕನ ಹಿಂದೆ ದೊಡ್ಡ ಪಿತೂರಿ ಹಾಗೂ ಷಡ್ಯಂತ್ರ ನಡೆಯುತ್ತಿದೆ.

 

ರಾಜ್ಯಕ್ಕೆ ಅತ್ಯುನ್ನತ ಹುದ್ದೆಯಾಗಿರುವ ಮುಖ್ಯಮಂತ್ರಿ ಹುದ್ದೆ ಬಹಳ ಪವಿತ್ರವಾದದ್ದು ಆ ಹುದ್ದೆಗೇರಬೇಕಾದರೆ ಅಷ್ಟು ಸುಲಭದ ಕೆಲಸವಲ್ಲ ರಾಜ್ಯದಲ್ಲಿ ಪಕ್ಷವನ್ನು ಬೆಳೆಸಿ ರಾಜ್ಯಾದ್ಯಂತ ಹಲವು ಶಾಸಕರು ಹಾಗೂ ಸಂಸದರನ್ನು ಗೆಲ್ಲಿಸಿ ರಾಜ್ಯದಲ್ಲಿ ಸರ್ಕಾರವನ್ನು ಅಧಿಕಾರಕ್ಕೆ ತಂದಿರುವ ಹೆಗ್ಗಳಿಕೆ ಬಿಎಸ್ ಯಡಿಯೂರಪ್ಪ ನವರಿಗೆ ಸಲ್ಲುತ್ತದೆ.

ಇಷ್ಟೆಲ್ಲಾ ವಿಷಯ ಪಕ್ಷದ ವರಿಷ್ಠರಿಗೆ ಗೊತ್ತಿದ್ದರೂ ಸಹ ಇಂತಹ ಉತ್ತಮ ನಾಯಕನ ಬದಲಾವಣೆಗೆ ಮುಂದಾಗಿರುವುದು ಒಳ್ಳೆಯ ಸಂಗತಿಯಲ್ಲ ಆದ್ದರಿಂದ ಪಕ್ಷದ ವರಿಷ್ಠರು ಈ ಹುದ್ದೆಯ ಬದಲಾವಣೆಗೆ ಮುಂದಾಗುವ ಬದಲು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರನ್ನು ಮುಂದುವರಿಸುವುದು ಸೂಕ್ತ ಎಂದು ರಾಜ್ಯದ ಜನತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.

 

ತೇವಡೆಹಳ್ಳಿಯ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ ಮಾತನಾಡಿ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯಾದ್ಯಂತ ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಆದ್ದರಿಂದ ಪಕ್ಷದ ವರಿಷ್ಠರು ರಾಜ್ಯದ ಹಿತದೃಷ್ಟಿಯಿಂದ ಆಡಳಿತ ಯಂತ್ರ ಕುಸಿಯುವ ಹಂತಕ್ಕೆ ಬಂದಿರುವುದರಿಂದ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸುವುದು ಸೂಕ್ತ ಆದ್ದರಿಂದ ಪಕ್ಷದ ವರಿಷ್ಠರು ಕೂಡಲೇ ಸೂಕ್ತ ಅವಲೋಕನ ನಡೆಸಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಸ್ವಾಮೀಜಿಗಳು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

One thought on “ಬಿ ಎಸ್ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲು_ ಸ್ವಾಮೀಜಿಗಳ ಆಗ್ರಹ.

  1. ನಮಸ್ಕಾರ ಗುರುಗಳಿಗೆ
    ಬಿ ಜೆ ಪಿ ಪಕ್ಷದಲ್ಲಿ ಇನ್ನೂ ಅನೇಕ ಹಿರಿಯ ಲಿಂಗಾಯತ ಸಮುದಾಯದವರು ಇದ್ದಾರೆ ಅದು ಅಲ್ಲದೆ ಬಿ ಎಸ್ ಯಡಿಯೂರಪ್ಪ ನವರು ೪ ಬಾರಿ ಮುಖ್ಯಮಂತ್ರಿ ಯಾಗಿದ್ದಾರೆ ಬೇರೆ ಯವರಿಗೂ ಒಂದು ಅವಕಾಶವನ್ನು ಕೂಡೂನಾ
    ಇದಕ್ಕೆ ನಿಮ್ಮ ಅಭಿಪ್ರಾಯ ತಿಳಿಸಿ

Leave a Reply

Your email address will not be published. Required fields are marked *

You cannot copy content of this page

error: Content is protected !!