ಚಿತಾಗಾರಗಳ ದೃಶ್ಯಗಳನ್ನು ಪ್ರಸಾರ ಮಾಡುವುದರಿಂದ ವೀಕ್ಷಕರಿಗೆ ಮಾನಸಿಕ ಒತ್ತಡವಾಗಿ ಸಾವು ಸಂಭವಿಸಬಹುದು. ಹೀಗಾಗಿ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಕಾಯ್ದೆಯಡಿ ಮಾಧ್ಯಮಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಲೆಟ್ಸ್ ಕಿಟ್ ಫೌಂಡೇಷನ್ ಪಿಐಎಲ್ ಸಲ್ಲಿಸಿತ್ತು
ಇದನ್ನು ವಿಚಾರಿಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚನೆ ನೀಡಿದ್ದು, ವೀಕ್ಷಕರಿಗೆ ಚಾನಲ್ ಬದಲಿಸುವ ಆಯ್ಕೆಯೂ ಇದೆ. ಉತ್ತಮವಾದದ್ದನ್ನು ವೀಕ್ಷಿಸಲು ಚಾನಲ್ ಬದಲಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಪಿಐಎಲ್ ಇತ್ಯರ್ಥಪಡಿಸಿದೆ. ಕೊವಿಡ್ ಆರಂಭವಾದಾಗಿನಿಂದಲೂ ವಾಸ್ತವ ಚಿತ್ರಣವನ್ನು ಕಟ್ಟಿಕೊಡುತ್ತಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಈ ಸಂದರ್ಭದಲ್ಲಿ ಹೈಕೋರ್ಟ್ ಸದರಿ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದು ಗಮನಾರ್ಹವಾಗಿದೆ.