ನಿಷೇಧ ವಿಧೇಯಕ _2021 ಅಂಗೀಕಾರ.
ವಿಧಾನಸಭೆ ಕಲಾಪದಲ್ಲಿ ತೀವ್ರ ಪರ-ವಿರೋಧ ಚರ್ಚೆಯ ನಡುವೆ ಇಂದು ಮತಾಂತರ ನಿಷೇಧ ವಿಧೇಯಕ ಅಂಗೀಕಾರವಾಗಿದೆ.
ಇನ್ನು ಕಾಯ್ದೆಗೆ ಸಂಬಂಧಿಸಿದಂತೆ ವಿರೋಧಪಕ್ಷಗಳು ಸಾಕಷ್ಟು ಆಕ್ಷೇಪ ಹಾಗೂ ವಿರೋಧ ವ್ಯಕ್ತಪಡಿಸಿದ ಮಧ್ಯೆಯೂ ಬಿಜೆಪಿ ಸರ್ಕಾರದಿಂದ ಮತಾಂತರ ನಿಷೇಧ ವಿಧೇಯಕ ಅಂಗೀಕಾರವಾಗಿದೆ.
ಈ ಮೂಲಕ ಕೆಳಮನೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಸರ್ಕಾರದ ಸದಸ್ಯರಿಂದ ಒಪ್ಪಿಗೆ ಪಡೆದು ಮತಾಂತರ ನಿಷೇಧ ವಿಧೇಯಕ ಅಂಗೀಕಾರವಾಗಿದೆ.
ಇನ್ನು ಕಾಯ್ದೆ ಜಾರಿ ಸಂಬಂಧ ವಿರೋಧಪಕ್ಷಗಳು ಕಳೆದ ಎರಡು ಮೂರು ದಿನಗಳಿಂದ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನು ಕಾಯ್ದೆ ಜಾರಿ ಸಂಬಂಧ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ಸಾಕಷ್ಟು ವಾಗ್ವಾದ ನಡೆದಿದೆ ಆದರೂ ಸಹ ವಿರೋಧಪಕ್ಷಗಳ ಮಾತಿಗೆ ಮನ್ನಣೆ ನೀಡದೆ ಬಹುಮತ ಹೊಂದಿರುವ ಬಿಜೆಪಿ ಸರ್ಕಾರದಿಂದ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡುವ ಮೂಲಕ ಸ್ಪೀಕರ್ ಕಾಗೇರಿ ರವರು ಕಾಯ್ದೆಯನ್ನು ಅಂಗೀಕರಿಸಿದ್ದಾರೆ.
ಇನ್ನೂ ವಿಧಾನಸಭೆಯಲ್ಲಿ ಕೋಲಾಹಲ ಎಬ್ಬಿಸಿರುವ ಮತಾಂತರ ನಿಷೇಧ ಕಾಯ್ದೆ ಜಾರಿಗೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ತೀವ್ರ ಪ್ರತಿರೋಧ ಒಡ್ಡಿದ್ದಾರೆ.
ಏನೋ ಕಾಯ್ದೆಯಲ್ಲಿ ಬಲವಂತದ ಮತಾಂತರ ,ಆಮಿಷ ಒಡ್ಡಿ ಮತಾಂತರ ಮಾಡುವುದು ಹಾಗೂ ಕೆಲವಂಶಗಲು ಕಾಯ್ದೆಯಲ್ಲಿ ಇದ್ದು ಈ ಮೂಲಕ ಅಕ್ರಮವಾಗಿ ಮತಾಂತರ ಮಾಡುವುದಕ್ಕೆ ಬ್ರೇಕ್ ಬಿದ್ದಂತಾಗಿದೆ.
ಇನ್ನು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಜೆ ಜಾರ್ಜ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಸಾಕಷ್ಟು ಹಲವು ನಾಯಕರು ತೀವ್ರ ಪ್ರತಿರೋಧ ಒಡ್ಡಿದ್ದರು ಆದರೆ ಕೊನೆಗೆ ಸ್ಪೀಕರ್ ಕಾಗೇರಿ ಅವರು ಧ್ವನಿಮತದ ಮೂಲಕ ಕಾಯ್ದೆಯನ್ನು ಅಂಗೀಕರಿಸಿದ್ದಾರೆ.
ವರದಿ _ಮಾರುತಿ ಪ್ರಸಾದ್ ತುಮಕೂರು