ನಿಗದಿತ ಸಮಯಕ್ಕೆ ಆಗಮಿಸದ ಬಸ್ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ನಿಗದಿತ ಸಮಯಕ್ಕೆ ಆಗಮಿಸದ ಬಸ್ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ತುಮಕೂರು_ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿಯ ಬನ್ನಿಮರದ ಕಟ್ಟೆ ಬಳಿ ಗುರುವಾರದಂದು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಬಾರದೆ ಇರುವುದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

 

ಇನ್ನು ಪ್ರತಿನಿತ್ಯ ಈ ಭಾಗದಿಂದ ತುಮಕೂರು ಹಾಗೂ ಕುಣಿಗಲ್ ಭಾಗಕ್ಕೆ ಸಾಕಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಗ್ರಾಮಾಂತರ ಪ್ರದೇಶದಿಂದ ನಗರಕ್ಕೆ ತೆರಳುತ್ತಾರೆ ಆದರೆ ಈ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ವಿದ್ಯಾರ್ಥಿಗಳು ಕಾಲೇಜಿಗೆ ತೆರಳುವ ಸಂದರ್ಭದಲ್ಲಿ ನಿಲುಗಡೆ ನೀಡದೆ ತೊಂದರೆ ನೀಡುತ್ತಿದ್ದಾರೆ ಈ ಮೂಲಕ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶಗೊಂಡು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಸ್ಥಳದಲ್ಲಿದ್ದ ಡ್ರೈವರ್ ಹಾಗೂ ಕಂಡಕ್ಟರ್ ಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

 

 

 

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೂ ಸಹ ಗಮನಕ್ಕೆ ತಂದರೂ ಸಹ ಯಾವುದೇ ಅಧಿಕಾರಿಗಳು ನಮಗೆ ಸ್ಪಂದಿಸುತ್ತಿಲ್ಲ ಆದಕಾರಣ ಎಂದು ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version