ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಪಂಚಾಯಿತಿ ಅಧಿಕಾರಿಗಳ ನಡೆಗೆ ಸಾರ್ವಜನಿಕರ ಆಕ್ರೋಶ.
ತುಮಕೂರು_ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆಯಂತೆ ಆಗಸ್ಟ್ 13 ರಿಂದ 15 ರ ವರೆಗೂ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜಗಳನ್ನ ಹಾರಿಸುವ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು.
ರಾಜ್ಯದ್ಯಂತ ಸರ್ಕಾರಿ ಕಚೇರಿಗಳು ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಗೌರವ ಸೂಚಿಸಬೇಕು ಎಂದು ಸರ್ಕಾರಿ ಆದೇಶ ಹೊರಡಿಸಿದೆ ಆದರೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬುಕ್ಕ ಪಟ್ಟಣ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಆಗೌರವ ತಂದಿದ್ದು ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಸದ ಬುಟ್ಟಿಯಲ್ಲಿ ಬಾವುಟ ಹಾರಿಸಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.
ವರದಿ _ಮಾರುತಿ ಪ್ರಸಾದ್ ತುಮಕೂರು