ಮೇ ಮೊದಲ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ: ಶಿಕ್ಷಣ ಸಚಿವ ಬಿ.ಸಿ ನಾಗೇಶ್
ತಿಪಟೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು ವಿದ್ಯಾರ್ಥಿಗಳಿಗೆ ಹೂ ನೀಡುವ ಮೂಲಕ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯಬೇಕು ಎಂದು ಶುಭ ಕೋರಿದ ಅವರು ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಕೊರೋ ನ ಬಂದ್ದಾಗಿನಿoದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಕುಸಿದಿರುವ ಕಾರಣ ಈ ಬಾರಿಯ ಪರಿಕ್ಷೆಸಹ ವಿದ್ಯಾರ್ಥಿಗಳಿಗೆ ಸರಳವಾಗಿ ಇರುತ್ತದೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಲ್ಟಿಪಲ್ ಚಾಯ್ಸ್ ಮಾದರಿಯಲ್ಲಿ ಪರೀಕ್ಷೆಯನ್ನು ನೀಡಲಾಗಿದೆ ಹಾಗಾಗಿ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಎದುರಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಅಂತಹ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಕೊಠಡಿಗೆ ಸಂಬಂಧಿಸಿದಂತೆ ಅವಶ್ಯಕತೆ ಇರುವಷ್ಟು ಪ್ರಶ್ನೆ ಪತ್ರಿಕೆಗಳನ್ನು ಮಾತ್ರ ರವಾನಿಯಾಗಲಿದ್ದು ಅದರಂತೆ ಪರೀಕ್ಷೆ ಕಟ್ಟು ನಿಟ್ಟಿನ ಕ್ರಮದೊಂದಿಗೆ ನಡೆಯುತ್ತಿದೆ ಎಂದರು.
ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸುಮಾರು 7 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.