ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಮೇಶ್ ಜಾರಕಿಹೊಳಿ

ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಮೇಶ್ ಜಾರಕಿಹೊಳಿ

 

ರಮೇಶ್ ಜಾರಕಿಹೊಳಿ ಸಂಬಂಧಿಸಿದ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ರಮೇಶ್ ಜಾರಕಿಹೊಳಿ ರವರರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪನವರು ರಮೇಶ್ ಜಾರಕಿಹೊಳಿ ರವರ ರಾಜೀನಾಮೆಯನ್ನು ಅಂಗೀಕರಿಸಿ ರಾಜ್ಯಪಾಲರಿಗೆ ರವಾನಿಸಿದ್ದಾರೆ. ಮಾಧ್ಯಮದವರಿಗೆ ನನಗೆ ಪ್ರತಿಕ್ರಿಯೆ ನೀಡಿದಬಾಲಚಂದ್ರ ಜಾರಕಿಹೊಳಿ ಮುಂದಿನ ಎರಡು ದಿನಗಳಲ್ಲಿ ರಮೇಶ್ ಜಾರಕಿಹೊಳಿ ರವರೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಲಿದ್ದು ಸತ್ಯಾಂಶ ತಿಳಿಯಲಿದೆ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆದ ನಂತರ ಸತ್ಯಾಂಶ ಹೊರಬೀಳಲಿದೆ ರಮೇಶ್ ಜಾರಕಿಹೊಳಿ ಅವರು ನಿರ್ದೋಷಿಯಾಗಿ ಬರಲಿದ್ದಾರೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version