ಮಂಗಳೂರು: ಪೋಕ್ಸೊ ಪ್ರಕರಣದ ಆರೋಪಿ ಕೋರ್ಟ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮಂಗಳೂರು: ಪೋಕ್ಸೊ ಪ್ರಕರಣದ ಆರೋಪಿ ಕೋರ್ಟ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮಂಗಳೂರು: ಪೋಕ್ಸೊ ಪ್ರಕರಣದ ಆರೋಪಿಯೋರ್ವ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.

 

ಪೋಕ್ಸೊ ಪ್ರಕರಣದ ಆರೋಪಿ ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

 

ಆತ ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಕ್ಷಣಹೊತ್ತಲ್ಲೇ ನೆಲಕ್ಕೆ ಅಪ್ಪಳಿಸಿದ ಆರೋಪಿಯ ತಲೆಗೆ ಭಾರೀ ಪೆಟ್ಟು ಬಿದ್ದಿದ್ದು, ತಲೆಯಿಂದ ಅಧಿಕ ಪ್ರಮಾಣದ ರಕ್ತ ಸೋರಿಕೆಯಾಗಿದೆ. ಬಳಿಕ ಆತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

 

ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಯು ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You cannot copy content of this page

error: Content is protected !!