ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಮಾದರಿಯಾದ ರತ್ನಸಂದ್ರ ಗ್ರಾಮ ಪಂಚಾಯಿತಿ.
ಸಿರಾ_ತುಮಕೂರು ಜಿಲ್ಲೆ ಸಿರಾ ತಾಲೂಕಿನ ರತ್ನಸಂದ್ರ ಗ್ರಾಮ ಪಂಚಾಯತ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿನೂತನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿ ಯಾಗಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಮೃತ ಮಹೋತ್ಸವದ ಸಲುವಾಗಿ ಪ್ರಧಾನ ಮಂತ್ರಿ ರವರ ಅಮೃತ ಸರೋವರ ಕಾರ್ಯಕ್ರಮದಲ್ಲಿ ದೊಡ್ಡಗೋಳ ವ್ಯಾಪ್ತಿಯ ಕಲ್ಲುಕುಂಟೆ ಗೋಕಟ್ಟೆಯ ಸಮಗ್ರ ಅಭಿವೃದ್ಧಿ ಕೆಲಸವನ್ನು ಕೈಗೆತ್ತಿಕೊಂಡಿದ್ದು ಅಮೃತ್ ಸರೋವರ ಕಾರ್ಯಕ್ರಮದಡಿಯಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗೋ ಕಟ್ಟೆಯನ್ನು ಮಾದರಿ ಕಟ್ಟೆಯನ್ನಾಗಿ ನಿರ್ಮಿಸಲು ಸ್ಥಳೀಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಪಣತೊಟ್ಟಿದ್ದು ಅದರಂತೆ ಗೋಕಟ್ಟೆಯನ್ನು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಪ್ರಧಾನ ಮಂತ್ರಿ ಅಮೃತ್ ಸರೋವರ ಕಾರ್ಯಕ್ರಮದ ಅಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು.
75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಗೋಕಟ್ಟೆ ಆವರಣದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸುವ ಮೂಲಕ ವಿನೂತನವಾಗಿ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಗಿದೆ.
ಇನ್ನು ಗೋಕಟ್ಟೆಯ ಆವರಣದಲ್ಲಿ ನೂತನ ದ್ವಜಸ್ತಂಬ ನಿರ್ಮಾಣ ಮಾಡಿದ್ದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಿರಿಯ ಮುಖಂಡರು ಆದ ಶ್ರೀರಾಮಚಂದ್ರಯ್ಯ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಗೋಕಟ್ಟೆಯನ್ನು ಸಂರಕ್ಷಿಸುವ ಉತ್ತಮ ಕೆಲಸವನ್ನು ಕೈಗೆತ್ತಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು ಇದೇ ಸಂದರ್ಭದಲ್ಲಿ ಗೋಕಟ್ಟೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಇನ್ನು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಉಪಾಧ್ಯಕ್ಷರಾದ ಲಕ್ಷ್ಮೀದೇವಿ , ಜಿಲ್ಲಾ ಪಂಚಾಯಿತಿ ಐ.ಇ.ಸಿ ಸಂಯೋಜಕರು, ಗ್ರಾಮ ಪಂಚಾಯಿತಿಯ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಟಿ ಎ. ಇ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ರತ್ನಸಂದ್ರ ಹಾಗೂ ದೊಡ್ಡಗೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಹಾಜರಿದ್ದರು.
ವರದಿ_ ಮಾರುತಿ ಪ್ರಸಾದ್ ತುಮಕೂರು